ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡದ ಸುಪ್ರೀಂಕೋರ್ಟ್ ಪರಿಸ್ಥಿತಿಯನ್ನು ಕಾದು ನೋಡಿ ನಿರ್ಧರಿಸುವುದಾಗಿ ತಿಳಿಸಿದೆ.
ಮದ್ಯ ನೀತಿ ಪ್ರಕರಣದ ಪ್ರಮುಖ ಆರೋಪಿ ಎಂದು ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. ಕೇಜ್ರಿವಾಲ್ ಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದ್ದರೆ, ಹೈಕೋರ್ಟ್ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್.ವಿ. ಭಟ್ಟಿ ನೇತೃತ್ವದ ವಿಭಾಗೀಯ ಪೀಠ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದ್ದನ್ನು ಹೈಕೊರ್ಟ್ ವಿಚಾರಣೆ ಮಾಡದೇ ತಡೆ ನೀಡಿದೆ. ಹಾಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಯಿತು ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.
ಹೈಕೋರ್ಟ್ ಸ್ಥಳೀಯ ನ್ಯಾಯಾಲಯದ ಆದೇಶವನ್ನು ಗಮನಿಸದೇ ತಡೆ ನೀಡಿ ತಪ್ಪು ಮಾಡಿದೆ ಅಂದರೆ ನಾವು ತಪ್ಪು ಮಾಡಬೇಕಾ? ಆದ್ದರಿಂದ ನಾವು ಪ್ರಕರಣವನ್ನು ಕಾದು ನೋಡಿ ಜಾಮೀನು ನೀಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ಹೇಳಿತು.