ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದ್ದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿದೆ.
ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಗಿದ್ದು, ಈ ವೇಳೆ ಮಾತನಾಡಿದ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಏನು ಮಾಡುತ್ತಿದ್ದಾರೆ ಅದು ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದರು.
ಸುಪ್ರೀಂಕೋರ್ಟ್ ಇತ್ತೀಚೆಗೆ ಸೇಂಥಿಲ್ ಬಾಲಾಜಿ ಪ್ರಕರಣದಲ್ಲಿ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಹೆಚ್ಚುವರಿ ದಿನ ವಶಕ್ಕೆ ನೀಡುವಂತೆ ಮನವಿ ಮಾಡುವುದಿಲ್ಲ ಎಂದು ಕೇಂದ್ರ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.