ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೆತ್ತವರು, ಪತ್ನಿ ಹಾಗೂ ಮಕ್ಕಳೊಂದಿಗೆ ದೆಹಲಿಯ ಫ್ಲಾಗ್ ಸ್ಟಾಫ್ ರಸ್ತೆಯಲ್ಲಿರುವ ಸರ್ಕಾರಿ ಮನೆಯನ್ನು ತೆರವುಗೊಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಮನೆಯನ್ನು ತೆರವುಗೊಳಿಸಿ ಆಮ್ ಆದ್ಮಿ ಪಕ್ಷದ ಮುಖಂಡ ಅಶೋಕ್ ಮಿಥಲ್ ಅವರ ಫಿರೋಜ್ ಶೇಹ್ ರಸ್ತೆಯಲ್ಲಿರುವ ಅಧಿಕೃತ ನಿವಾಸಕ್ಕೆ ಸ್ಥಳಾಂತರಗೊಂಡಿದ್ದಾರೆ.
ಪಂಜಾಬ್ ನಿಂದ ರಾಜ್ಯಸಭಾ ಸದಸ್ಯರಾಗಿರುವ ಅಶೋಕ್ ಮಿಥಲ್ ಅವರಿಗೆ ದೆಹಲಿಯಲ್ಲಿ ಸರ್ಕಾರಿ ಬಂಗಲೆ ನೀಡಲಾಗಿದ್ದು, ಈ ಮನೆಗೆ ಕೇಜ್ರಿವಾಲ್ ಕುಟುಂಬ ಸ್ಥಳಾಂತರಗೊಂಡಿದ್ದಾರೆ. ನವರಾತ್ರಿ ಸಮಯದಲ್ಲಿ ಸರ್ಕಾರಿ ಬಂಗಲೆ ತೆರವುಗೊಳಿಸುವುದಾಗಿ ಕೇಜ್ರಿವಾಲ್ ಈ ಹಿಂದೆಯೇ ಘೋಷಿಸಿದ್ದರು.