ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯ ಏಪ್ರಿಲ್ 1ರವರೆಗೆ ವಿಸ್ತರಿಸಿದೆ.
ಜಾರಿ ನಿರ್ದೇಶನಾಲಯ 7 ದಿನಗಳ ಕಸ್ಟಡಿಗೆ ಮನವಿ ಮಾಡಿತ್ತು. ಆದರೆ ದೆಹಲಿ ನ್ಯಾಯಾಲಯ 4 ದಿನಗಳ ಕಾಲ ವಿಸ್ತರಿಸಿದೆ.
ಏಪ್ರಿಲ್ 1ರಂದು ಬೆಳಿಗ್ಗೆ 11.30ಕ್ಕೆ ವಿಚಾರಣೆಗೆ ಹಾಜರುಪಡಿಸುವಂತೆ ದೆಹಲಿ ನ್ಯಾಯಾಲಯ ಸೂಚಿಸಿದೆ.