ಮುಂಬೈ: ಸಂಗೀತ ಲೋಕದ ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತವಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
92 ವರ್ಷದ ಹಿರಿಯ ಗಾಯಕಿ ಆಶಾ ಭೋಸ್ಲೆ ಅವರನ್ನು ಬ್ರಿಡ್ಜ್ ಕ್ಯಾಂಡಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ದಶಕಗಳಿಂದ ಬಾಲಿವುಡ್ ಸೇರಿದಂತೆ ಹಲು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುವ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಭಿನ್ನ ಗಾಯನದ ಮೂಲಕ ಖ್ಯಾತಿ ಪಡೆದಿದ್ದರು.



