ಭಾರತ ವನಿತೆಯರನ್ನು 8 ವಿಕೆಟ್ ಗಳಿಸಿದ ಮಣಿಸಿದ ಶ್ರೀಲಂಕಾ ತಂಡ ಏಷ್ಯಾಕಪ್ ಟಿ-20 ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾರತ ವನಿತೆಯರು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಹೊಂದಿದ್ದಾರೆ.
ಡಂಬುಲ್ಲಾದಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 165 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಶ್ರೀಲಂಕಾ ವನಿತೆಯರು 18.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಶ್ರೀಲಂಕಾ ತಂಡ ಆರಂಭಿಕ ಆಘಾತ ಅನುಭವಿಸಿದರೂ ನಾಯಕಿ ಚಾಮರೈ ಅಟ್ಟಪಟ್ಟು ಮತ್ತು ಹರ್ಷಿತಾ ಸಮರವಿಕ್ರಮ ಎರಡನೇ ವಿಕೆಟ್ ಗೆ 87 ರನ್ ಜೊತೆಯಾಟದಿಂದ ತಂಡವನ್ನು ಮುನ್ನಡೆಸಿದರು.
ಚಾಮರೈ 43 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 61 ರನ್ ಬಾರಿಸಿದರೆ, ಹರ್ಷಿತಾ 51 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ ಅಜೇಯ 69 ರನ್ ಗಳಿಸಿದರು. ನಂತರ ಕವಿಶಾ ದಿಲ್ಹಾರಿ (ಅಜೇಯ 30 ರನ್) ಜೊತೆ 73 ರನ್ ಜೊತೆಯಾಟದಿಂದ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ವನಿತೆಯರು ಸ್ಮೃತಿ ಮಂದಾನ ಅರ್ಧಶತಕದಿಂದ ಉತ್ತಮ ಮೊತ್ತ ಕಲೆ ಹಾಕಿತು. ಸ್ಮೃತಿ ಮಂದಾನ 47 ಎಸೆತಗಳಲ್ಲಿ 10 ಬೌಂಡರಿ ಒಳಗೊಂಡ 60 ರನ್ ಗಳಿಸಿದರು. ರಿಚಾ ಘೋಷ್ (30) ಮತ್ತು ಜೆಮಿಹಾ ರೋಡ್ರಿಗಜ್ (29) ತಕ್ಕಮಟ್ಟಿಗೆ ಪ್ರದರ್ಶನ ನೀಡಿದರು.