ಸಿಕ್ಕಿಂನಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗ ಕುಸಿದು ಗ್ಯಾಸ್ ಸೋರಿಕೆ ಆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಸಂಭವಿಸಿದೆ.
ದಕ್ಷಿಣ ಸಿಕ್ಕಿಂನ ಸಮರ್ ದಂಗ್ ಸುರಂಗದಲ್ಲಿ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದ್ದು, 12 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ 18 ಮಂದಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ರಕ್ಷಣಾ ಪಡೆಗಳು ಧಾವಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಪಟೇಲ್ ಕನ್ ಸ್ಟ್ರಕ್ಷನ್ ಕಂಪನಿ ಟೀಸ್ಟಾ ಸ್ಟೇಜ್ ೪ ಹಂತದ ಹೈಡ್ರೋಲಿಕ್ ಪ್ರಾಜೆಕ್ಟ್ ನಲ್ಲಿ ನಿರತವಾಗಿತ್ತು ಎಂದು ತಿಳಿದು ಬಂದಿದೆ.
ಸುರಂಗ ಮಾರ್ಗದ ಒಳಗೆ ಭೂಕುಸಿತ ಸಂಭವಿಸಿದ್ದು, ಇನ್ನೂ ಹಲವಾರು ಮಂದಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.



