Friday, May 15, 2026
Google search engine
Homeದೇಶದೆಹಲಿ ವಿಧಾನಸಭಾ ಪ್ರತಿಪಕ್ಷ ನಾಯಕಿಯಾಗಿ ಅತಿಶಿ ನೇಮಕ: ಈ ಸ್ಥಾನ ಅಲಂಕರಿಸಿದ ಮೊದಲ ಮಹಿಳೆ!

ದೆಹಲಿ ವಿಧಾನಸಭಾ ಪ್ರತಿಪಕ್ಷ ನಾಯಕಿಯಾಗಿ ಅತಿಶಿ ನೇಮಕ: ಈ ಸ್ಥಾನ ಅಲಂಕರಿಸಿದ ಮೊದಲ ಮಹಿಳೆ!

ದೆಹಲಿ ವಿಧಾನಸಭಾ ಪ್ರತಿಪಕ್ಷ ನಾಯಕಿಯಾಗಿ ಮಾಜಿ ಮುಖ್ಯಮಂತ್ರಿ ಅತಿಶಿ ನೇಮಕಗೊಂಡಿದ್ದಾರೆ. ಈ ಮೂಲಕ ಪ್ರತಿಪಕ್ಷ ನಾಯಕ ಸ್ಥಾನ ಅಲಂಕರಿಸಿದ ಮೊದಲ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಭಾನುವಾರ ನಡೆದ ಆಮ್ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಬಿಜೆಪಿ ದೆಹಲಿ ಸಿಎಂ ಆಗಿ ರೇಖಾ ಗುಪ್ತಾ ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕಿಯಾಗಿ ಅತಿಶಿ ಆಯ್ಕೆ ಸೂಕ್ತ ಎಂದು ಸಭೆಯಲ್ಲಿ ಪ್ರಬಲ ವಾದ ನಡೆಯಿತು ಎಂದು ತಿಳಿದು ಬಂದಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಆಮ್ ಆದ್ಮಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ದೆಹಲಿ ಮಾಜಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸೌರಭ್ ಭಾರದ್ವಾಜ್ ಸೋಲುಂಡ ಹಿನ್ನೆಲೆಯಲ್ಲಿ ಕಲ್ಕಾಜಿ ಶಾಸಕಿ ಅತಿಶಿಗೆ ಪ್ರತಿಪಕ್ಷ ನಾಯಕಿ ಸ್ಥಾನ ಲಭಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments