ಯುಜಿಸಿ-ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ತನಿಖೆಗೆ ಆಗಮಿಸಿದ ಅಧಿಕಾರಿಗಳ ಮೇಲೆ ಬಿಹಾರದ ಗ್ರಾಮದಲ್ಲಿ ಹಲ್ಲೆ ನಡೆದಿದೆ.
ನಾವಡಾದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಸಿಬಿಐ ಅಧಿಕಾರಿಗಳ ತಂಡ ನಕಲಿ ಎಂದು ಭಾವಿಸಿ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಹಲ್ಲೆ ಪ್ರಕರಣದ ವೀಡಿಯೊವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೀಡಿಯೋ ದೃಶ್ಯವನ್ನು ಆಧರಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.