Thursday, November 21, 2024
Google search engine
Homeಜಿಲ್ಲಾ ಸುದ್ದಿಸನಾತನ ಧರ್ಮ ಸಾಮ್ರಾಜ್ಯ ಸ್ಥಾಪನೆಗೆ 5 ಲಕ್ಷ ಕೋಟಿ ಮೀಸಲು ಗುರಿ: ಉಡುಪಿಯಲ್ಲಿ ಬಾಬಾ ರಾಮ್...

ಸನಾತನ ಧರ್ಮ ಸಾಮ್ರಾಜ್ಯ ಸ್ಥಾಪನೆಗೆ 5 ಲಕ್ಷ ಕೋಟಿ ಮೀಸಲು ಗುರಿ: ಉಡುಪಿಯಲ್ಲಿ ಬಾಬಾ ರಾಮ್ ದೇವ್

ಸನಾತನ ಧರ್ಮಗಳ ಸಾಮ್ರಾಜ್ಯ ಸ್ಥಾಪನೆಯ ಪಾರಮಾರ್ಥಿಕ ಸೇವೆಗೆ 5 ಲಕ್ಷ ಕೋಟಿ ರೂ. ಮೀಸಲಿಡಬೇಕು ಎಂಬ ಕನಸು ಇದೆ ಎಂದು ಯೋಗ ಗುರು ಹಾಗೂ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮ್ ದೇವ್ ಹೇಳಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಶುಕ್ರವಾರ ಆರಂಭಗೊಂಡ ಮೂರು ದಿನಗಳ 51ನೇ ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಆಕ್ಸ್ ಫರ್ಡ್, ಹಾರ್ವರ್ಡ್ ವಿಶ್ವವಿದ್ಯಾಲಯಗಳ ಕಾಲ ಮುಗಿಯಿತು. ಮುಂದೆ ಗುರುಕುಲದ ಶತಮಾನ ಆರಂಭವಾಗಲಿದೆ. ಮುಂದೆ ಸಂಸ್ಕೃತದ ಶತಮಾನ, ಮೂಲ ಧರ್ಮ, ಸಂಸ್ಕೃತಿ ಆಚಾರಗಳ ಪಾರಮಾರ್ಥಿಕ ದರ್ಶನಕ್ಕಾಗಿ ಸನಾತನ ಧರ್ಮಗಳ ಸಾಮ್ರಾಜ್ಯ ವಿಶ್ವದಲ್ಲೇ ಪಸರಿಸಬೇಕು. ಅದಕ್ಕಾಗಿ 5 ಲಕ್ಷ ಕೋಟಿಯ ಯೋಜನೆ ಗುರಿ ಹೊಂದಿರುವುದಾಗಿ ಹೇಳಿದರು.

ಸಂಸ್ಕೃತ ಭಾಷೆ ಒಂದು ಪಾತ್ರೆ ಇದ್ದಂತೆ ಅದು ಚೆನ್ನಾಗಿದ್ದರೆ ಅದರಲ್ಲಿ ತಯಾರಾಗುವ ಪಾಯಸ ಚೆನ್ನಾಗಿರುತ್ತದೆ. ಸಂಸ್ಕೃತ ಅತಿ ಶ್ರೇಷ್ಠವಾದ ಭಾಷೆ, ಇಂಗ್ಲಿಷ್ ಪ್ರತಿದಿನ ಪರಿವರ್ತನೆಯಾಗುವ ಭಾಷೆ ಎಂದು ಸಂಸ್ಕೃತದ ಹಿರಿಮೆ ಗರಿಮೆ ಬಗ್ಗೆ ಮಾತನಾಡಿದರು. ವಿಮರ್ಶೆ, ತರ್ಕ, ಚರ್ಚೆ ನಡೆಯುವ ಹಿಂದೂ ಧರ್ಮವೇ ಶ್ರೇಷ್ಠ. ಸನಾತನದಲ್ಲಿ ಸ್ವಾತಂತ್ರ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

50 ವರ್ಷಗಳ ಬಳಿಕ ದಕ್ಷಿಣ ಭಾರತದಲ್ಲಿ ಈ ಸಮ್ಮೇಳನ ಆಯೋಜನೆಯಾಗಿದೆ‌. 300ಕ್ಕೂ ಅಧಿಕ ವಿದ್ವಾಂಸರು 2,000 ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಮಠದ ಆಸುಪಾಸು ಹತ್ತಾರು ಗೋಷ್ಠಿಗಳು, ವೇದ, ಭಗವದ್ಗೀತೆ, ಭಾಷಾ ಶಾಸ್ತ್ರಗಳ ವಿಚಾರಮಂಡನೆ ನಡೆಯಲಿದೆ. ಬೌದ್ಧ ಧರ್ಮ, ಪ್ರಾಕೃತ, ಜೈನ ಧರ್ಮ, ಭಾರತೀಯ ಜ್ಞಾನ ಮತ್ತು ವ್ಯವಸ್ಥೆ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ಸಮಲೋಚನೆ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments