Monday, June 8, 2026
Google search engine
Homeರಾಜ್ಯಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪ ಮತದಾನ ದಿನಾಂಕ ಘೋಷಣೆ

ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪ ಮತದಾನ ದಿನಾಂಕ ಘೋಷಣೆ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಮತದಾನ ದಿನಾಂಕ ಘೋಷಣೆ ಆಗಿದೆ.

ಕೇಂದ್ರ ಚುನಾವಣಾ ಆಯೋಗ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.

ಮಾಜಿ ಸಚಿವರಾದ ಹೆಚ್.ವೈ. ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಹಾಗೂ ಶ್ಯಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಸ್ಥಾನಗಳಿಗೆ ಮರು ಮತದಾನ ನಡೆಯಲಿದೆ.

ಮಾರ್ಚ್ 23ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮಾರ್ಚ್ 26ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಟಿಕೆಟ್​​ ಫೈಟ್​​  ಜೋರು:

ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​​ ಹಂಚಿಕೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್​​ ಎರಡೂ ಪಕ್ಷಗಳಿಗೆ ಸವಾಲಿನ ಕೆಲಸವಾಗಿ ಮಾರ್ಪಟ್ಟಿದೆ. ಶಾಮನೂರ ಶಿವಶಂಕರಪ್ಪ ನಿಧನದಿಂದ ತೆರವಾದ ಕ್ಷೇತ್ರದಲ್ಲಿ ಗೆಲ್ಲುವ ಉತ್ಸಾಹದಲ್ಲಿದ್ದ ಬಿಜೆಪಿ ಸ್ಥಿತಿ ಮನೆಯೊಂದು ಮೂರು ಬಾಗಿಲಾಗಿದ್ದರೆ, ಇತ್ತ ಕಾಂಗ್ರೆಸ್​​ನಲ್ಲಿ ಟಿಕೆಟ್​​ಗಾಗಿ ಮುಸ್ಲಿಂ ಸಮುದಾಯ ಪಟ್ಟು ಹಿಡಿದಿದೆ.

ಮತ್ತೊಂದೆಡೆ ತಮ್ಮ ಕುಟುಂಬಕ್ಕೇ ಮರಳಿ ಟಿಕೆಟ್​​ ಸಿಗಬೇಕೆಂವ ಆಗ್ರಹವನ್ನು ಶಾಮನೂರು ಕುಟುಂಬ ವ್ಯಕ್ತಪಡಿಸಿದ್ದರೆ, ಈ ನಡುವೆ ಅಖಾಡಕ್ಕೆ ಹೊಸ ಮುಖದ ಪ್ರವೇಶವೂ ಆಗಿದೆ. ಎಐಸಿಸಿ ಯುವ ಘಟಕದ ಕಾರ್ಯದರ್ಶಿ, ಜಿಲ್ಲೆಯ ಮುಸ್ಲಿಂ ಸಮಾಜದ ಪ್ರಭಾವಿ ಮುಖಂಡ ಸೈಯದ್ ಸೈಪುಲ್ಲಾ ಪುತ್ರ ಮಹಮ್ಮದ್ ಖಾಲೀದ್ ಕೂಡ ಟಿಕೆಟ್​​ ಆಕಾಂಕ್ಷಿಯಾಗಿದ್ದಾರೆ.

ಬೃಹತ್ ಇಫ್ತಾರ್​​ ಕೂಟ ಆಯೋಜನೆ ಮಾಡಿ ಟಿಕೆಟ್​​​ಗೆ ಬೇಡಿಕೆ ಇಟ್ಟಿದ್ದಾರೆ. ಈ ಕಾರ್ಯಕ್ರಮಕ್ಕೆ ಮತ್ತೋರ್ವ ಆಕಾಂಕ್ಷಿ ಹಾಗೂ ಸಚಿವ ಎಸ್​​.ಎಸ್​​. ಮಲ್ಲಿಕಾರ್ಜುನ್​​ ಅವರ ಪುತ್ರ ಸಮರ್ಥ ಶಾಮನೂರು ಕೂಡ ಹಾಜರಾಗಿರುವುದು ಕುತೂಹಲ ಕೆರಳಿಸಿದೆ. ಜಿಲ್ಲೆಯಲ್ಲಿ ಕಿತ್ತಾಡುತ್ತಿದ್ದ ಬಿಜೆಪಿ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಪಕ್ಷ ಯಾರಿಗೇ ಮಣೆ ಹಾಕಿದರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜಿಪಿ ಟಿಕೆಟ್ ಆಕಾಂಕ್ಷಿಗಳಾದ ಬಿ.ಜಿ. ಅಜಯಕುಮಾರ, ಯಶವಂತರಾವ್ ಜಾಧವ್, ಶ್ರೀನಿವಾಸ ದಾಸಕರಿಯಪ್ಪ, ರಾಜನಹಳ್ಳಿ ಶಿವಕುಮಾರ ಹಾಗೂ ದೇವರಮನೆ ಶಿವಕುಮಾರ ಒಂದೇ ವೇದಿಕೆಗೆ ಬಂದು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮತ್ತು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಬಣಗಳ ಟಿಕೆಟ್ ಆಕಾಂಕ್ಷಿಗಳು ಬಹುದಿನಗಳ ಬಳಿಕ ಒಂದೇ ವೇದಿಕೆಗೆ ಬಂದಿದ್ದು, ಪಕ್ಷ ಹೊಸ ಮುಖದ ಹುಡುಕಾಟ ನಡೆಸುತ್ತಿರೋದೇ ಇದರ ಹಿಂದಿನ ಕಾರಣ ಎನ್ನಲಾಗ್ತಿದೆ.

ಅತ್ತ ಬಾಗಲಕೋಟೆಯಲ್ಲಿಯೂ ಟಿಕೆಟ್​​ ಆಕಾಂಕ್ಷಿಗಳ ನಡುವಿನ ಸ್ಪರ್ಧೆ ಪಕ್ಷಗಳಲ್ಲಿ ಜೋರಾಗಿಯೇ ಇದ್ದು, ಅಂತಿಮವಾಗಿ ಅಖಾಡಕ್ಕೆ ಇಳಿಯುವವರು ಯಾರೆಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗುವ ನಿರೀಕ್ಷೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments