ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸುಪ್ರೀಂಕೋರ್ಟ್ ನಲ್ಲೂ ವಜಾಗೊಂಡಿದೆ.
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಬೈರತಿ ಬಸವರಾಜು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಗುರುವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬೈರತಿ ಬಸವರಾಜು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ನಿಯಮಿತ ಜಾಮೀನು ಅರ್ಜಿ ಸಲ್ಲಿಸಲು ಸೂಚನೆ ನೀಡಿದೆ.
ಇದೇ ವೇಳೆ ಬೆಂಗಳೂರಿನ ಕೆಆರ್ ಪುರಂ ಶಾಸಕ ಬೈರತಿ ಬಸವರಾಜು ಶರಣಾಗದೇ ಇದ್ದರೆ ಪೊಲೀಸರು ಬಂಧಿಸಲು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದ್ದರು.



