Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು

ಬೆಂಗಳೂರು ಕಾಲ್ತುಳಿತ ಪ್ರಕರಣ: ಪೊಲೀಸ್ ಆಯುಕ್ತ ದಯಾನಂದ್ ಅಮಾನತು ಎತ್ತಿಹಿಡಿದ ಕೇಂದ್ರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು
police commissioner dayanand
police commissioner dayanand

ಬೆಂಗಳೂರು:  ಆರ್ ಸಿಬಿ ಐಪಿಎಲ್ ಗೆದ್ದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ರಾಜ್ಯ ಸರ್ಕಾರ ಆದೇಶವನ್ನು ಕೇಂದ್ರ ಸರ್ಕಾರ ಎತ್ತಿ ಹಿಡಿದಿದೆ,

ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿದ ಪ್ರಕರಣ ಸಂಬಂಧ ಕರ್ತವ್ಯ ಲೋಪದಡಿ ಮಾಜಿ ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಬಗ್ಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ.

ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಇತ್ತೀಚೆಗೆ ಸಮಗ್ರ ವರದಿ ಸಲ್ಲಿಸಿತ್ತು.

ಕೇಂದ್ರಕ್ಕೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮೂಲಕ ವರದಿ ಸಲ್ಲಿಸಲಾಗಿತ್ತು. ಇದರಲ್ಲಿ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಭದ್ರತಾ ವೈಫಲ್ಯ ಹಾಗೂ ಸಂವಹನ ಕೊರತೆ ಪ್ರಮುಖ ಕಾರಣಗಳು. ಈ ಅಂಶಗಳನ್ನಾಧರಿಸಿಯೇ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರದ ವರದಿಗೆ ಕೇಂದ್ರ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಅಖಿಲ ಭಾರತ ಆಡಳಿತ ಸೇವಾಮಟ್ಟದ ಅಧಿಕಾರಿಗಳು ಅಂದರೆ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಅಮಾನತು ಬಗ್ಗೆ ನಿಯಮಾನುಸಾರ ಕೇಂದ್ರ ಸರ್ಕಾರ ಅಂತಿಮ ನಿರ್ಣಯ ತೆಗೆದುಕೊಳ್ಳಬೇಕಿದೆ. ಅಧಿಕಾರಿಗಳ ಕೇಡರ್ ಹಾಗೂ ನೇಮಕಾತಿ ಬಗ್ಗೆ ರಾಜ್ಯ ಸರ್ಕಾರ ಅಧಿಕಾರ ಹೊಂದಿದೆ. ಆದರೆ ಅಮಾನತು ವಿಚಾರದಲ್ಲಿ ಕೇಂದ್ರದ ತೀರ್ಮಾನವೇ ಅಂತಿಮವಾಗಿರಲಿದೆ. ಹೀಗಾಗಿ ಈಗಿನ ಐಪಿಎಸ್ ಅಧಿಕಾರಿಗಳ ತಲೆದಂಡ ಕುರಿತು ಕೇಂದ್ರಕ್ಕೆ ರಾಜ್ಯ ವರದಿ ಸಲ್ಲಿಸಿತ್ತು. ಇದೀಗ ಅಧಿಕಾರಿಗಳ ಅಮಾನತನ್ನು ಕೇಂದ, ಅನುಮೋದಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment