Thursday, May 14, 2026
Google search engine
Homeರಾಜ್ಯಬೆಳಗಾವಿ ಸಕ್ಕರೆ ಕಾರ್ಖಾನಯ ಬಾಯ್ಲರ್ ಸ್ಫೋಟ: 7ಕ್ಕೇರಿದ ಮೃತರ ಸಂಖ್ಯೆ

ಬೆಳಗಾವಿ ಸಕ್ಕರೆ ಕಾರ್ಖಾನಯ ಬಾಯ್ಲರ್ ಸ್ಫೋಟ: 7ಕ್ಕೇರಿದ ಮೃತರ ಸಂಖ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಬುಧವಾರ ಮಧ್ಯಾಹ್ನ ಸಂಭವಿಸಿದ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಗೊಂಡಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಗುರುವಾರ ಅಸುನೀಗಿದ್ದಾರೆ.

ಸ್ಥಳೀಯರಾದ ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ಅರವಳ್ಳಿ ನಿವಾಸಿ ಮಂಜುನಾಥ ಮಡಿವಾಳಪ್ಪ ಕಾಜಗಾರ್, ಗೋಕಾಕ್ ಗೊಡಚಿನಮಲ್ಕಿ ಗ್ರಾಮದ ನಿವಾಸಿ ಭರತೇಶ ಸಾರವಾಡಿ, ಅಥಣಿ ನಿವಾಸಿ ಮಂಜುನಾಥ್ ತೇರದಾಳ, ಬಾಗಲಕೋಟಮರೆಗುದ್ದಿ ಗ್ರಾಮದ ಗುರುಪಾದಪ್ಪ ತಮ್ಮನ್ನವರ್​​ ಮೃತಪಟ್ಟಿದ್ದಾರೆ.

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಘಟನೆಗೆ ಸ್ಪಂದಿಸದ ಸರ್ಕಾರ ಹಾಗೂ ಕಾರ್ಖಾನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ವಿಕ್ರಮ ಇನಾಮದಾರ್​​ ಎಂಬವರಿಗೆ ಸೇರಿದ ಈ ಕಾರ್ಖಾನೆಯ ವಾಲ್ ದುರಸ್ತಿ ಮಾಡುವಾಗ ವಾಲ್ ಸ್ಫೋಟಗೊಂಡು ಕುದಿಯುವ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದಿತ್ತು. ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತ ಕಾರ್ಮಿಕರ ಕುಟುಂಬಸ್ಥರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಸ್ಪಂದಿಸುತ್ತಿಲ್ಲ, ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.  ಸಂತ್ರಸ್ತರಾದವರ ಹುದ್ದೆಗೆ ತಕ್ಕಂತೆ ಪರಿಹಾರ ನೀಡಬೇಕು. ಪರಿಹಾರ ಘೋಷಣೆ ಆಗುವವರೆಗೂ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments