Monday, May 25, 2026
Google search engine
Homeಅಪರಾಧಬೆಂಗಳೂರಿನಲ್ಲಿ ಗಂಡ, ಮಕ್ಕಳ ಕತ್ತು ಹಿಸುಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಬೆಂಗಳೂರಿನಲ್ಲಿ ಗಂಡ, ಮಕ್ಕಳ ಕತ್ತು ಹಿಸುಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಸಾಲಬಾಧೆ ತಾಳಲಾರದೇ ಪತಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ನಂತರ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಹೃದಯಾವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದ ನಿವಾಸಿಗಳಾದ ಗಂಡ ಶಿವು (32), ಮಗಳು ಚಂದ್ರಕಳಾ (11) ಮಗ ಉದಯ್ ಸೂರ್ಯ (07) ಮೃತಪಟ್ಟಿದ್ದು, ತಾಯಿ ಅದೃಷ್ಟವಶಾತ್‌ ಪಾರಾಗಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಪತಿಯ ಚಿಕಿತ್ಸೆಗಾಗಿ ಕುಟುಂಬ ಮಾಡಿಕೊಂಡಿದ್ದ ಸಾಲ ಹೆಚ್ಚಾಗಿ ಮರಳಿಸಲು ಆಗದ ಕಾರಣ ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದು, ನಾವು ಸತ್ತರೆ ಮಕ್ಕಳು ಅನಾಥರಾಗುತ್ತಾರೆ ಎಂದು ಅವರನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು ಎಂದು ತಿಳಿದು ಬಂದಿದೆ.

ಮೊದಲಿಗೆ ಗಂಡ ಮತ್ತು ಮಕ್ಕಳ ಕುತ್ತಿಗೆ ವೇಲ್‌ನಿಂದ ಹೆಂಡತಿ ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸದ್ಯ ಮಹಿಳೆಗೆ ಹೊಸಕೋಟೆ ಸರ್ಕಾರಿ ಆಸ್ವತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments