Friday, May 15, 2026
Google search engine
HomeಬೆಂಗಳೂರುBengaluru: ಸಿಲಿಂಡರ್ ಸ್ಪೋಟ ಮೂವರಿಗೆ ಗಂಭೀರ ಗಾಯ

Bengaluru: ಸಿಲಿಂಡರ್ ಸ್ಪೋಟ ಮೂವರಿಗೆ ಗಂಭೀರ ಗಾಯ

ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

ಅನಿಲ‌ ಸಿಲಿಂಡರ್ ಸ್ಫೋಟಗೊಂಡು ಅಸ್ಸಾಂ ಮೂಲದ ಬಿದನ್ ದಾಸ್, ದಯಾಲ್ ಶಾಂತಿ ಹಾಗೂ ಗುಲಾಭ ಕರ್ಮಾಕರ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಹೆನ್ನಾಗರ ಸಮೀಪದ ಐಕಾನ್ ಬಡಾವಣೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮೂವರು ರಮೇಶ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದರು. ರಾತ್ರಿ ಸಿಲಿಂಡರ್ ಆನ್ ಮಾಡಿ ಮಲಗಿದ್ದ ಪರಿಣಾಮ ಬೆಳಿಗ್ಗೆ ಎದ್ದು ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ.

ಸ್ಫೋಟಗೊಂಡ ತೀವ್ರತೆಗೆ ಮನೆಯ ಕಿಟಕಿ, ಬಾಗಿಲುಗಳು ಚೂರು ಚೂರಾಗಿವೆ. ಪರಿಣಾಮ ಮನೆಯಲ್ಲಿದ್ದ ಮೂವರಿಗೂ ಗಂಭೀರ ಗಾಯಗಳಾಗಿದ್ದು, ನಾರಾಯಣ ಆಸ್ಪತ್ರೆಗೆ ರವಾನಿಸಲಾಗಿದೆ.

ಬಿದನ್ ದಾಸ್ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ಭೇಟಿ ನೀಡಿದ್ದು, ಸೂರ್ಯಸಿಟಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments