Monday, June 29, 2026
Google search engine
Homeಅಪರಾಧಕಾಮಿಡಿ ಕಿಲಾಡಿಯ ಮಡೆನೂರು ಮನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು!

ಕಾಮಿಡಿ ಕಿಲಾಡಿಯ ಮಡೆನೂರು ಮನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು!

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಕಾಮಿಡಿ ಕಿಲಾಡಿಯ ಹಾಸ್ಯ ಕಲಾವಿದ ಮಡೆನೂರು ಮನು ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಡೆನೂರು ಮನು ನಟಿಸಿದ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆಗೆ ತೆರೆಗೆ ಬರಲಿದೆ. ಚಿತ್ರ ಬಿಡಗುಡೆಗೆ ಒಂದು ದಿನ ಅತ್ಯಾಚಾರ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಶಾಂತಿಗ್ರಾಮದಲ್ಲಿ ಮನು ವಶಕ್ಕೆ ಪಡೆದಿದ್ದಾರೆ.

ಮಡೆನೂರು ಮನು ನನ್ನನ್ನು ಪ್ರೀತಿಸುತ್ತಿದ್ದಾನೆ ಎಂದು ಹೇಳಿಕೊಂಡು ನನ್ನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು, ಎರಡು ಬಾರಿ ಅಬಾರ್ಷನ್ ಮಾಡಿಸಿದ್ದಾನೆ. ಸಿನಿಮಾಗೂ ನಾನು ಲಕ್ಷಾಂತರ ರೂಪಾಯಿ ಹಣ ಕೊಟ್ಟಿದ್ದೇನೆ ಎಂದು ಸಹ ಕಲಾವಿದೆ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಮಡೆನೂರು ಮನು ಕಿರುತೆರೆ ನಟಿ ಜೊತೆ ಮಾಡಿರುವ ವಾಟ್ಸಪ್ ಚಾಟ್ ಗಳ ವಿವರಗಳನ್ನು ನಟಿ ಪೊಲೀಸರಿಗೆ ನೀಡಿದ್ದಾರೆ. ಪೊಲೀಸರು ಎಫ್ ಐಆರ್ ದಾಖಲಿಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಮಡೆನೂರು ಮನು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments