Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕ್ರೀಡೆ

ಕಾಲ್ತುಳಿತ ದುರಂತ ಸಿಐಡಿ, ಎಸ್ ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
benagluru stampede

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 56 ಮಂದಿ ಗಾಯಗೊಂಡ ದುರಂತ ಘಟನೆಯ ತನಿಖೆನ್ನು ಸಿಐಡಿ ಮತ್ತು ಎಸ್ ಐಟಿಗೆ ವಹಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ಪೀಠ ಗುರುವಾರ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು.

ರಾಜ್ಯ ಸರ್ಕಾರದ ವರದಿ ಸಲ್ಲಿಸಿದ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ವಿಚಾರಣೆ ವೇಳೆ ಪ್ರಸ್ತುತ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, 15 ದಿನಗಳಲ್ಲಿ ವರದಿ ಕೈ ಸೇರಲಿದೆ ಎಂದರು.

ಪರಿಸ್ಥಿತಿಯ ಗಂಭೀರತೆ ಅರಿತು ಪ್ರಕರಣವನ್ನು ಸಿಐಡಿ ಮತ್ತು ಎಸ್ ಐಟಿಗೆ ತನಿಖೆ ವರ್ಗಾಯಿಸಲಾಗುವುದು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತು ಎಫ್ ಐಆರ್ ದಾಖಲಾಗಿದೆ ಎಂದರು.

ಕಾಲ್ತುಳಿತ ಪ್ರಕರಣದಲ್ಲಿ ಯಾರೂ ಆರೋಪ-ಪ್ರತ್ಯಾರೋಪ ಮಾಡಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ ನ್ಯಾಯಮೂರ್ತಿಗಳು, ಕಾಲ್ತುಳಿತ ದುರಂತಕ್ಕೆ ಕಾರಣ ಏನು ಎಂದು ಸಮಗ್ರ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 36 ಸಾವಿರ ಆಸನ ಸಾಮರ್ಥ್ಯ ಹೊಂದಿದ್ದು, ಎರಡೂವರೆ ಲಕ್ಷ ಜನರು ಸೇರಿದ್ದು ದುರಂತಕ್ಕೆ ಕಾರಣ ಎಂದು ಹೇಳಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯ ಉಸ್ತುವಾರಿಯನ್ನು ಕೆಎಸ್ ಸಿಎ ಮತ್ತು ರಾಯಲ್ ಚಾಲೆಂಜರ್ಸ್ ಆಯೋಜಿಸಿದ್ದು, ಆರ್ ಸಿಬಿ ಟಿಕೆಟ್ ಹಂಚಿಕೆ ಮಾಡಲು ನಿರ್ಧರಿಸಿತ್ತು. ಅಲ್ಲದೇ 36 ಸಾವಿರ ಟಿಕೆಟ್ ವ್ಯವಸ್ಥೆ ಮಾಡಿತ್ತು ಎಂದು ಹೇಳಿದರು.

ಸಂಭ್ರಮಾಚರಣೆ ಕೆಎಸ್ ಸಿಎ ವಹಿಸಿಕೊಂಡಿದ್ದು, ರಾಜ್ಯ ಸರ್ಕಾರ 1600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, ಕೆಎಸ್ ಆರ್ ಪಿ ತುಕಡಿ, ಕುಡಿಯುವ ನೀರು ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು ಎಂದು ವಿವರಿಸಿದರು. ಈ ವೇಳೆ ಮಾರ್ಗಸೂಚಿ ಅನುಸರಿಸಲಾಗಿತ್ತೇ? ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತೆ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.

ಪ್ರಕರಣದ ತನಿಖೆ ನಡೆಸಲು ಈಗಾಗಲೇ ಕ್ರಮ ಕೈಗೊಂಡಿರುವುದರಿಂದ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಲಾಯಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment