Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ಬೆಂಗಳೂರು

ಟ್ರಾಫಿಕ್ ಜಾಮ್ ಕಾರಣ ಬೆಂಗಳೂರಿನ 103 ಬಸ್ ನಿಲ್ದಾಣ ಸ್ಥಳಾಂತರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
bmtc
bmtc

ಬೆಂಗಳೂರು ನಗರದಲ್ಲಿನ ಅವೈಜ್ಞಾನಿಕ ಅಸಮರ್ಪಕ ಬಸ್​ ನಿಲ್ದಾಣಗಳನ್ನು ಸ್ಥಳಾಂತರ ಮಾಡಲು ಸಂಚಾರ​ ಪೊಲೀಸರು ಹಾಗೂ ಬಿಎಂಟಿಸಿ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧಪಡಿಸಿದ್ದಾರೆ.

ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಟ್ರಾಫಿಕ್​ ಸಿಗ್ನಲ್​ಗಳ ಬಳಿಯೇ ಬಸ್​ ನಿಲ್ದಾಣಗಳಿರುವುದೂ ಕೂಡ ಟ್ರಾಫಿಕ್​ ಜಾಮ್​​ ಹೆಚ್ಚಾಗಲು ಕಾರಣವಾಗಿದೆ.

ಇದರಿಂದ ಸಂಚಾರ ಪೊಲೀಸರು, ಬಿಎಂಟಿಸಿ ಅಧಿಕಾರಿಗಳ ಜೊತೆ ಜಂಟಿ ಸಮೀಕ್ಷೆ ನಡೆಸಿ ಸ್ಥಳಾಂತರ ಮಾಡಬೇಕಾದ 103 ಬಸ್​ ನಿಲ್ದಾಣಗಳ ಪಟ್ಟಿ ಮಾಡಿದ್ದಾರೆ.

ಬಸ್​ ನಿಲ್ದಾಣಗಳ ಸ್ಥಳಾಂತರಕ್ಕೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರಕ್ಕೆ ಪತ್ರ

ಸಾಮಾನ್ಯವಾಗಿ ಹೆಚ್ಚಿನ ದಟ್ಟಣೆಯ ಸಿಗ್ನಲ್​ಗಳಿಗೆ ಸಮೀಪವಿರುವ 103 ಬಸ್​ ನಿಲ್ದಾಣಗಳನ್ನು ಕನಿಷ್ಠ 50 ಮೀಟರ್​​ಗಳಿಂದ 300 ಮೀಟರ್​ಗಳವರೆಗೂ ಸ್ಥಳಾಂತರ ಮಾಡುವ ಅನಿವಾರ್ಯತೆ ಇದೆ ಎಂದು ಸಂಚಾರ ಪೊಲೀಸರು, ಬಿಎಂಟಿಸಿ ಸಮೀಕ್ಷೆಯಲ್ಲಿ ಮನಗಂಡಿದ್ದಾರೆ.

ಸ್ಥಳಾಂತರ ಮಾಡಿ ಎಂದು ಗ್ರೇಟರ್​ ಬೆಂಗಳೂರು ಪ್ರಾಧಿಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ, ಎಂ.ಜಿ ರಸ್ತೆ, ಯಲಹಂಕ ಆರ್​ಎಂಜೆಡ್​​, ಈಸ್ಟ್​ ಎಂಡ್​ ಜಂಕ್ಷನ್​, ಐಟಿಪಿಎಲ್​ ಆರ್​ಎಕ್ಸ್​ಡಿಕ್ಸ್​ ಆಸ್ಪತ್ರೆ, ಹೋಫ್​ಫಾರ್ಮ್​​​​ ಜಂಕ್ಷನ್​ ಸೇರಿ 103 ಸ್ಥಳಗಳಲ್ಲಿ ಟ್ರಾಫಿಕ್​ ದಟ್ಟಣೆ ಇಳಿಸುವ ಉದ್ದೇಶವಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment