Home ಬೆಂಗಳೂರು ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನಕ್ಕೆ ಪಾತ್ರವಾಗಿದ್ದು, ದೆಹಲಿಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿತು.

by Editor
0 comments
power save

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನಕ್ಕೆ ಪಾತ್ರವಾಗಿದ್ದು, ದೆಹಲಿಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿತು.

ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆಪಿ ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು.

ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ.  ಇಂಧನ ದಕ್ಷತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿ ಎರಡನೇ ಸ್ಥಾನ ದೊರೆತಿದೆ.

ರಾಜ್ಯಾದ್ಯಂತ ಸುಸ್ಥಿರ ಇಂಧನ ಪದ್ಧತಿಗಳನ್ನು ಉತ್ತೇಜಿಸುವ ಕ್ರೆಡಲ್‌, ಈ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ  ಇಂಧನ ದಕ್ಷತೆ ಯೋಜನೆಗಳನ್ನು ಗುರುತಿಸಿ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಿದೆ.

banner

ಇಂಧನ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ರಾಷ್ಟ್ರಮಟ್ಟದಲ್ಲಿ ಎರಡನೇ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, “ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ.  ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನದ ಉಪಕ್ರಮಗಳಿಗೆ ನಮ್ಮ ಸರ್ಕಾರ ಒತ್ತು ನೀಡುತ್ತದೆ. ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಇಂಧನ ದಕ್ಷತೆಯ ನೀತಿಗಳ ಅನುಷ್ಠಾನದಲ್ಲಿ ರಾಜ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟನಲ್ಲಿ ಸರಿಯಾದ ಪದ್ಧತಿಗಳನ್ನು ಅನುಸರಿಸುವ ಮೂಲಕ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಲು ರಾಜ್ಯ ಬದ್ಧವಾಗಿದೆ ಎಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.

ಪ್ರಶಸ್ತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆಪಿ ರುದ್ರಪ್ಪಯ್ಯ, ಇಂಧನ ಸಂರಕ್ಷಣೆಗೆ ಬದ್ಧವಾಗಿರುವ ಕ್ರೆಡಲ್‌ಗೆ ಈ ಮನ್ನಣೆ ದೊರೆತಿರುವುದು ಹೆಮ್ಮೆಯ ವಿಷಯ. ಮುಂದಿನ ಐದು ವರ್ಷಗಳಲ್ಲಿ 5 ಪ್ರಮುಖ ವಲಯಗಳಲ್ಲಿ ಸರಿಸುಮಾರು 744 ಮಿಲಿಯನ್‌ ಯೂನಿಟ್‌ ಇಂಧನ ಉಳಿತಾಯದ ಗುರಿ ಸಾಧಿಸಲು ಸರ್ಕಾರಿ ಮತ್ತು ಖಾಸಗಿ ಪಾಲುದಾರರೊಂದಿಗೆ ಕೆಲಸ ಮಾಡಲಿದ್ದೇವೆ ಎಂದರು.

ಕರ್ನಾಟಕವು ಕಳೆದ 3 ವರ್ಷಗಳಿಂದ, ಅಂದರೆ ಎಸ್‌ ಇಇಐ 2020 ಮತ್ತು ಎಸ್‌.ಇಇಐ 2021-2022, 2023ರ ಅವಧಿಯಲ್ಲಿ “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿತ್ತು.

ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (ಎಸ್‌.ಇ.ಇ.ಐ) 2023ರಲ್ಲಿ ಕರ್ನಾಟಕ 85.75 ಅತ್ಯಧಿಕ ಅಂಕದೊಂದಿಗೆ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿತ್ತು. ಈ ಬಾರಿ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Belagavi ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ: ವಿಧಾನಪರಿಷತ್ ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ! 80 ಪ್ರಯಾಣಿಕರ ದೋಣಿಗೆ ಡಿಕ್ಕಿ ಹೊಡೆದ ಸ್ಪೀಡ್ ಬೋಟ್: 1 ಸಾವು, ಇಬ್ಬರು ನಾಪತ್ತೆ ಪ್ರೀತಿಸಿದವರು ಸಿಗಲಿಲ್ಲ ಅಂತ ಮದುವೆ ಆಗಿದ್ದ ಪ್ರೇಮಿಗಳು ಆತ್ಮಹತ್ಯೆ! ಕೋಲಾರದಲ್ಲಿ ಬೊಲೆರೋ- ಬೈಕ್ ಗಳ ನಡುವೆ ಡಿಕ್ಕಿ: 5 ಮಂದಿ ದುರ್ಮರಣ 48 ದಿನದ ನಂತರ ಶಸ್ತ್ರಚಿಕಿತ್ಸೆ ಇಲ್ಲದೇ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್! ವಿಜಯ್ ಮಲ್ಯ, ನೀರವ್ ಮೋದಿಯಿಂದ 22,000 ಕೋಟಿ ಆಸ್ತಿ ವಶ: ನಿರ್ಮಲಾ ಸೀತರಾಮನ್ ಅಂಬೇಡ್ಕರ್ ಹೆಸರು ಫ್ಯಾಷನ್ ಆಗಿಬಿಟ್ಟಿದೆ: ಅಮಿತ್ ಶಾ ಹೇಳಿಕೆ ಖಂಡಿಸಿ ಕೈ ಪ್ರತಿಭಟನೆ ಭಾರತ- ಆಸ್ಟ್ರೇಲಿಯಾ 3ನೇ ಟೆಸ್ಟ್ ಡ್ರಾ: ಭಾರತ ಫೈನಲ್ ಕನಸ್ಸು ಭಗ್ನ? ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ! ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಸ್ಪಿನ್ ದಂತಕತೆ ಆರ್.ಅಶ್ವಿನ್ ನಿವೃತ್ತಿ ಘೋಷಣೆ!