Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

ಬೆಂಗಳೂರಿನಲ್ಲಿ 5,000 ರಸ್ತೆ ಗುಂಡಿ ಗುರುತು: ಸಚಿವ ಡಿಕೆ ಶಿವಕುಮಾರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 17 ವೀಕ್ಷಣೆಗಳು
dk shivakumar

ಬೆಂಗಳೂರಿನಲ್ಲಿ 5 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, 4400 ರಸ್ತೆ ಗುಂಡಿಗಳನ್ನು ಆದ್ಯತೆಯ ಮೇಲೆ ಮುಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕಳೆದ 4 ದಿನಗಳಲ್ಲಿ 2200 ಗುಂಡಿಗಳನ್ನು ಮುಚ್ಚಲಾಗಿದ್ದು, ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ಗಮನಕ್ಕೆ ತಂದಿದ್ದರು. ಅನಾಹುತಗಳನ್ನು ತಪ್ಪಿಸಲು ಎಚ್ಚರಿಕೆ ವಹಿಸಲಾಗಿದೆ ಎಂದರು.

ರಸ್ತೆಗಳಲ್ಲಿ ಕಂಡುಬರುವ ಗುಂಡಿಗಳನ್ನು ಪತ್ತೆ ಮಾಡಿ ಅದನ್ನು ಸರ್ಕಾರದ ಗಮನಕ್ಕೆ ತರುವ ಸಲುವಾಗಿ “ರಸ್ತೆ ಗುಂಡಿ ಗಮನ” ಎಂಬ ಆ್ಯಪ್​ ಅನ್ನು ರೂಪಿಸಲಾಗಿದೆ. ಅದರ ಮೂಲಕ ಜನರು ಗುಂಡಿ ಬಿದ್ದ ಸ್ಥಳವನ್ನು ಗುರುತಿಸಿ ಅದರಲ್ಲಿ ಅಪ್​ಲೋಡ್​ ಮಾಡಬಹುದು. ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ ಕೊಡಲು ತಿಳಿಸಲಾಗಿತ್ತು. ಆ್ಯಪ್​​ನಲ್ಲಿ ನಾಗರಿಕರೂ ದೂರುಗಳನ್ನು ಸಲ್ಲಿಸುತ್ತಿದ್ದಾರೆ” ಎಂದು ತಿಳಿಸಿದರು.

ನಗರದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸ ಮಾಡಲಾಗುತ್ತಿದ್ದು, ಸ್ಕೈವಾಕ್​ಗಳನ್ನು ಸ್ವಚ್ಛ ಮಾಡಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಿ ಹೋಗುವುದು ಮಾತ್ರವಲ್ಲ, ಗುಣಮಟ್ಟದ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಹಾಟ್​ಮಿಕ್ಸ್, ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಸೇರಿದಂತೆ ಮೂರೂ ಮಾದರಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಭಾರೀ ವಾಹನಗಳ ಓಡಾಟ, ಮಳೆಗಾಲ ಸೇರಿದಂತೆ ಇನ್ನಿತರೆ ಸಮಸ್ಯೆಗಳಿಂದಾಗಿ ರಸ್ತೆಗಳಲ್ಲಿ ಗುಂಡಿಗಳು ಸೃಷ್ಟಿಯಾಗುತ್ತಿವೆ. ಈ ಸಮಸ್ಯೆ ಪರಿಹಾರಕ್ಕಾಗಿ ಹಂತ- ಹಂತವಾಗಿ ಎಲ್ಲ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿ ಮಾಡಲಾಗುತ್ತಿದೆ. ಇದು 30 ವರ್ಷ ಬಾಳಿಕೆ ಬರಲಿದೆ ಎಂದು ಹೇಳಿದರು.

ರಸ್ತೆ ಗುಂಡಿಗಳಿಂದ ಆಗುವ ಅಪಾಯಗಳ ಬಗ್ಗೆ ಮಾತನಾಡಿದ ಡಿಸಿಎಂ, “ಹೆಣ್ಣು ಮಕ್ಕಳು, ಚಿಕ್ಕ ಮಕ್ಕಳನ್ನು ಕರೆದೊಯ್ಯುವಾಗ ತೊಂದರೆಗಳಾಗಿದ್ದನ್ನು ನಾನು ಗಮನಿಸಿದ್ದೇನೆ. ಅದಕ್ಕಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ರಸ್ತೆ ಗುಂಡಿಗಳ ಮೇಲ್ವಿಚಾರಣೆಗಾಗಿ ರಸ್ತೆ ಗುಂಡಿ ಗಮನ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.

ನಗರದಲ್ಲಿ ಪ್ರತಿ ವರ್ಷ ಎದುರಾಗುವ ರಸ್ತೆ ಗುಂಡಿಗಳ ಸಮಸ್ಯೆಯನ್ನು ಪರಿಹರಿಸುವುದು ಮತ್ತು ಸುಗಮ ಪಾದಚಾರಿ ಮಾರ್ಗ ಹಾಗೂ ವಾಹನ ಸಂಚಾರಕ್ಕೆ ಸೌಲಭ್ಯ ಒದಗಿಸುವುದಕ್ಕೆ ಸಂಬಂಧಿಸಿದಂತೆ ಅಳವಡಿಸಿಕೊಂಡಿರುವ ಕಾರ್ಯವಿಧಾನದ ಕುರಿತು ಸವಿವರವಾದ ಪ್ರಮಾಣಪತ್ರ ಸಲ್ಲಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಜೂನ್‌ನಲ್ಲಿ ಹೈಕೋರ್ಟ್‌ ಸೂಚಿಸಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment