Tuesday, February 17, 2026
Google search engine
Homeಬೆಂಗಳೂರುಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪಿಯುಸಿ ವಿದ್ಯಾರ್ಥಿಗಳ ಜಾಲಿ ರೈಡ್‌ ಗೆ 7 ಜೀವ ಬಲಿ

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪಿಯುಸಿ ವಿದ್ಯಾರ್ಥಿಗಳ ಜಾಲಿ ರೈಡ್‌ ಗೆ 7 ಜೀವ ಬಲಿ

ಕಾರೊಂದು ನಿಯಂತ್ರಣ ಕಳೆದುಕೊಂಡಿದ್ದರಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ 7 ಮಂದಿ ಮೃತಪಟ್ಟ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್​​ಪೇಟೆ ಹೆದ್ದಾರಿಯಲ್ಲಿ ಸಂಭವಿಸಿದೆ.

ಹೊಸಕೋಟೆ ತಾಲೂಕಿನ ಎಂ.ಸತ್ಯವಾರ ಸಮೀಪ ಶುಕ್ರವಾರ ಮುಂಜಾನೆ ಎರಡು ಕಾರು, ಬೈಕ್‌ ಹಾಗೂ ಕ್ಯಾಂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಜನರು ಹಾಗೂ ಬೈಕ್ ಸವಾರ ಮೃತಪಟ್ಟಿದ್ದಾರೆ.

ಮೃತಪಟ್ಟ ಕಾರಿನಲ್ಲಿದ್ದ ೬ ಮಂದಿ ಬೆಂಗಳೂರಿನ ನಿವಾಸಿಗಳಾಗಿದ್ದು, ಬೈಕ್‌ ಸವಾರ ಸ್ಥಳೀಯ ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದರೆ, ಕ್ಯಾಂಟರ್‌ ಪಲ್ಟಿಯಾಗಿ ಚಕ್ರಗಳು ಹೊರಗೆ ಬಂದಿವೆ. ಬೈಕ್‌ ಅಪ್ಪಚ್ಚಿ ಆಗಿದ್ದು, ಮೃತರ ಗುರುತು ಹಿಡಿಯುವುದು ಕಷ್ಟವಾಗಿದೆ. ಗಾಯಗೊಂಡಿರುವ ಕ್ಯಾಂಟರ್​ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರಿನ ಕಾಲೇಜಿನ ಪಿಯು ವಿದ್ಯಾರ್ಥಿಗಳ ಜಾಲಿ ರೈಡ್ ದುರಂತಕ್ಕೆ ಕಾರಣ ಎನ್ನಲಾಗಿದೆ. ಎಕ್ಸ್​ ಯುವಿ 700 ಕಾರಿನಲ್ಲಿ ಬಂದಿದ್ದ ಆರು ಮಂದಿ ವಿದ್ಯಾರ್ಥಿಗಳು ಅತಿ ವೇಗದ ಚಾಲನೆಯೇ ಹಾಗೂ ಬೇಜವಾಬ್ದಾರಿ ಚಾಲನೆಯಿಂದ ಭೀಕರ ಸರಣಿ ಅಪಘಾತಕ್ಕೆ ಕಾರಣ ಎಂಬುದು ಈಗ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬೆಂಗಳೂರಿನಿಂದ ಹೊರಟ್ಟಿದ್ದ ಎಸ್‌ ಯುವಿ ಕಾರು ನಿಯಂತ್ರಣ ಕಳೆದುಕೊಂಡು ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಬೈಕ್‌ ಜೊತೆಗೆ ಕಾರು ಕೂಡ ನಂತರ ಕ್ಯಾಂಟರ್‌ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಮತ್ತೊಂದು ಕಾರಿಗೂ ಡಿಕ್ಕಿಯಾಗಿದೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಇಂದು ಬೆಳಗ್ಗೆ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎಕ್ಸ್​ಯುವಿ 700 ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ, ಅನಂತರ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಬಳಿಕ ನಿಯಂತ್ರಣ ತಪ್ಪಿದ ಕಾರು ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ.

ಇವರಲ್ಲಿ ಮೂವರ ಗುರುತು ಪತ್ತೆಯಾಗಿದ್ದು, ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ರಸ್ತೆಯಲ್ಲಿದ್ದ ವಾಹನಗಳನ್ನು ತೆರವು ಮಾಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಐಜಿ ಲಾಭೂರಾಮ್ ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments