Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

ಶೀಘ್ರದಲ್ಲೇ ಮೆಟ್ರೋಗೆ 96 ರೈಲುಗಳ ಸೇರ್ಪಡೆ: 4 ನಿಮಿಷಕ್ಕೊಂದು ರೈಲು ಸಂಚಾರ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 17 ವೀಕ್ಷಣೆಗಳು
kannadavahini namma metro
kannadavahini namma metro

ಶೀಘ್ರದಲ್ಲೇ ಹೊಸದಾಗಿ 96 ರೈಲುಗಳನ್ನು ಸೇರ್ಪಡೆಗೊಳಿಸುವ ಮೂಲಕ ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.

ಯೆಲ್ಲೋ ಲೈನ್​ ಆರಂಭದ ಬೆನ್ನಲ್ಲೇ ಬರೋಬ್ಬರಿ 96 ಹೊಸ ರೈಲುಗಳ ನಮ್ಮ ಮೆಟ್ರೋಗೆ ಬರುತ್ತಿದ್ದು, ಅವುಗಳು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ 4 ನಿಮಿಷಕ್ಕೊಂದರಂತೆ  ರೈಲು ಸಂಚಾರಕ್ಕೆ ಸಿದ್ಧತೆ ನಡೆದಿದೆ.

ನಮ್ಮ ಮೆಟ್ರೋ ಬಳಿ ಸದ್ಯ ಗ್ರೀನ್, ಪರ್ಪಲ್, ಯೆಲ್ಲೋ ಲೈನ್​​ಗಳು ಸೇರಿ ಒಟ್ಟು 64 ರೈಲುಗಳಿವೆ. ಆ ಪೈಕಿ ಗ್ರೀನ್ ಲೈನ್, ಪರ್ಪಲ್ ಲೈನ್​​ನಲ್ಲಿ 58, ಯೆಲ್ಲೋ ಲೈನ್​ನಲ್ಲಿ 6 ರೈಲುಗಳು ಹಾಲಿ ಕಾರ್ಯಾಚರಣೆ ನಡೆಸುತ್ತಿವೆ. ಈಗ ಇರುವ ಲೈನ್​​ಗಳಿಗೆ ಹೊಸ ರೈಲುಗಳು ಸೇರಿ, ಇನ್ನೂ ಆರಂಭವಾಗಬೇಕಿರುವ ಬ್ಲೂ ಮತ್ತು ಪಿಂಕ್​​ ಲೈನ್​​ಗಳಿಗೂ ರೈಲುಗಳನ್ನ ಆರ್ಡರ್​​ ನೀಡಲಾಗಿದೆ. ಇವುಗಳೆಲ್ಲ ಆಗಮಿಸಿದ ಬಳಿಕ ಹಾಲಿ ಇರುವ ನಮ್ಮ ಮೆಟ್ರೋ ರೈಲುಗಳ ಸಂಖ್ಯೆ 160ಕ್ಕೆ ಏರಿಕೆಯಾಗಲಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್​​ ಸಮಸ್ಯೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ಪ್ರಮುಖ ಪಾತ್ರ ವಹಿಸಿದೆ. ಇವುಗಳ ನಡುವಿನ ಸಂಚಾರ ಸಮಯ ಮತ್ತಷ್ಟು ಇಳಿಕೆಯಾದಲ್ಲಿ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳವಾಗುವ ನಿರೀಕ್ಷೆ ಇದೆ. ಬಹು ಸಮಯದಿಂದ ಮೆಟ್ರೋಗಳ ನಡುವಿನ ಸಂಚಾರ ಸಮಯ ಇಳಿಸಬೇಕೆಂಬ ಬೇಡಿಕೆ ಇದ್ದು, ಹೊಸ ರೈಲುಗಳ ಸೇರ್ಪಡೆ ಇದನ್ನು ಈಡೇರಿಸಲಿದೆ.

ಯಾವ ಲೈನ್​​ಗೆ ಎಷ್ಟು ಹೊಸ ರೈಲು?

ಗ್ರೀನ್​​ ಮತ್ತು ಪರ್ಪಲ್​​ ಲೈನ್​​ಗೆ 21

ಯೆಲ್ಲೋ ಲೈನ್​​ಗೆ 9 ಹೊಸ ರೈಲು, ಹೆಚ್ಚುವರಿಯಾಗಿ 6 ರೈಲು

ಬ್ಲ್ಯೂ ಲೈನ್​​ಗೆ 37 ಹೊಸ ರೈಲು.

ಸಿಲ್ಕ್ ಬೋರ್ಡ್ ಟು ಕೆಆರ್ ಪುರ 16 ರೈಲು

ಕೆ.ಆರ್. ಪುರದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 21 ರೈಲು

ಪಿಂಕ್​​ ಲೈನ್​​ಗೆ 26 ಹೊಸರೈಲು. ಹೆಚ್ಚುವರಿಯಾಗಿ 7 ರೈಲು

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment