ಎರಡು ಬಿಎಂಟಿಸಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಮಧ್ಯದಲ್ಲಿ ಸಿಲುಕಿದ ಆಟೋ ಅಪ್ಪಚ್ಚಿ ಆಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ.
ಬೆಂಗಳೂರಿನ ಹನುಂತನಗರದ ಸೀತಾ ವೃತ್ತದ ಬಳಿ ಶುಕ್ರವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಆಟೋ ಚಾಲಕ ಮತ್ತು ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಚಾಲಕ ಅನಿಲ್ ಕುಮಾರ್ ಮತ್ತು ಪ್ರಯಾಣಿಕ ವಿಷ್ಣು ಸ್ಥಳದಲ್ಲೇ ಅಸುನೀಗಿದ್ದಾರೆ. ಬಿಎಂಟಿಸಿ ಬಸ್ ಹಿಂದೆ ನಿಂತಿದ್ದ ಆಟೋಗೆ ಹಿಂದಿನಿಂದ ಬಂದ ಮತ್ತೊಂದು ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಬನಶಂಕರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


