Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

ಅನಧಿಕೃತ ಕಟ್ಟಡ ಮತ್ತು ನಿವೇಶನಗಳ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ: ಬೈರತಿ ಸುರೇಶ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
byrathi suresh

ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು ಎಂದಿದ್ದಾರೆ.

ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಈ ಅವಕಾಶವನ್ನು ಮೇ ತಿಂಗಳ 10 ರ ವೇಳೆಗೆ ಬಿ-ಖಾತಾ ಪಡೆದುಕೊಳ್ಳಲು ಸಮಯ ನೀಡಲಾಗಿತ್ತು.

ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಪ್ರದೇಶಗಳಲ್ಲಿ 30 ಲಕ್ಷಕ್ಕೂ ಅಧಿಕ ಇಂತಹ ಅನಧಿಕೃತ ಕಟ್ಟಡಗಳು/ಮನೆಗಳು/ನಿವೇಶನಗಳಿವೆ ಎಂದು ಅಂದಾಜಿಸಲಾಗಿದೆ. ಸರ್ಕಾರ ಒಂದು ಬಾರಿಯ ಅವಕಾಶ ನೀಡಿದ ನಂತರ ನಾಗರಿಕರು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿ ತಮ್ಮ ಆಸ್ತಿಗಳಿಗೆ ಬಿ-ಖಾತಾ ಪಡೆದುಕೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

2 ಲಕ್ಷ ಬಿ-ಖಾತಾ ವಿತರಣೆ

ಸರ್ಕಾರ ನೀಡಿದ ಅವಕಾಶವನ್ನು ಬಳಸಿಕೊಂಡಿರುವ ಸುಮಾರು 10 ಲಕ್ಷ ಆಸ್ತಿಗಳಿಗೆ ಬಿ-ಖಾತಾ ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಈ ಪೈಕಿ 2 ಲಕ್ಷ ಆಸ್ತಿಗಳಿಗೆ ಬಿ-ಖಾತೆಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಹಂತಹಂತವಾಗಿ ಬಿ-ಖಾತಾ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮೂರು ತಿಂಗಳು ವಿಸ್ತರಣೆ

ಸರ್ಕಾರದ ಈ ನಾಗರಿಕ ಸ್ನೇಹಿ ಸೌಲಭ್ಯವನ್ನು ಇನ್ನೂ ಹೆಚ್ಚಿನ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ವಿತರಣೆ ಪ್ರಕ್ರಿಯೆಯನ್ನು ಇನ್ನೂ ಮೂರು ತಿಂಗಳ ಕಾಲ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment