Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಬೆಂಗಳೂರು

ಬಿಬಿಎಂಪಿಗೆ 3.49 ಲಕ್ಷ ನಾಗರಿಕರಿಂದ 390 ಕೋಟಿ ರೂ. ಬಾಕಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
BBMP
BBMP

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 20.5 ಲಕ್ಷ ಜನರಲ್ಲಿ 3.49 ಲಕ್ಷ ನಾಗರಿಕರು ತಮ್ಮ ಆಸ್ತಿ ತೆರಿಗೆಯನ್ನು ಪಾವತಿಸಿಲ್ಲ. ಅದರಲ್ಲಿ 1.73 ಲಕ್ಷ ಜನರು ದೀರ್ಘಕಾಲದ ಸುಸ್ತಿದಾರರು ಮತ್ತು 1.76 ಲಕ್ಷ ಜನರು ಪ್ರಸ್ತುತ ವರ್ಷದ ಸುಸ್ತಿದಾರರು(2024-25). ಒಟ್ಟಾರೆಯಾಗಿ 3.49 ಲಕ್ಷ ನಾಗರಿಕರಿಂದ ಬಿಬಿಎಂಪಿಗೆ 390 ಕೋಟಿ ರೂ.ಗಳ  ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ.

ಆಸ್ತಿ ತೆರಿಗೆಯನ್ನು ಪಾವತಿಸದವರಿಗೆ ನೋಟಿಸ್‌ಗಳು, ಸಂದೇಶ(SMS)ಗಳು, ಐವಿಆರ್‌ಎಸ್ ಕರೆಗಳು, ವೈಯಕ್ತಿಕ ಕರೆಗಳು, ಮುಟ್ಟುಗೋಲು ನೋಟೀಸ್ ಗಳು ಕಳುಹಿಸಿದರೂ ಸಹ ದೀರ್ಘಕಾಲದ ಸುಸ್ತಿದಾರರನ್ನು ತೆರಿಗೆ ಪಾವತಿಸುವಂತೆ ಮಾಡಲಿಲ್ಲ.

ಒಂದು ಬಾರಿ ಪರಿಹಾರ ಯೋಜನೆ(ಒಟಿಎಸ್) ಅನ್ನು ಸಹ ಪಡೆಯದೇ ಉದ್ದೇಶಪೂರ್ವಕವಾಗಿ ದೀರ್ಘಕಾಲದ ಸುಸ್ತಿದಾರರಾಗಿದ್ದಾರೆ. ಹಲವು ವರ್ಷಗಳಿಂದ ಇವರು ಆಸ್ತಿ ತೆರಿಗೆಯನ್ನು ಪಾವತಿಸಿಲ್ಲ. ಇಂತಹ ನಾಗರಿಕರನ್ನು ಬಿಟ್ಟುಕೊಡುವುದು ಪ್ರಾಮಾಣಿಕ ತೆರಿಗೆ ಪಾವತಿದಾರರಿಗೆ ಸಂಪೂರ್ಣವಾಗಿ ಅನ್ಯಾಯ ಮಾಡಿದಂತಾಗುವುದು.

ಶೇ. 10 ರಷ್ಟು ದೀರ್ಘಕಾಲದ ಸುಸ್ತಿದಾರರ ಪರವಾಗಿ ಮಾತನಾಡುವ ಯಾರಾದರೂ ಶೇ. 90 ರಷ್ಟು ಪ್ರಾಮಾಣಿಕ ತೆರಿಗೆ ಪಾವತಿದಾರರ ವಿರುದ್ಧ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ನಿಲ್ಲುತ್ತಾರೆ.

ಬಿಬಿಎಂಪಿಯು ಕಾನೂನಾತ್ಮಕವಾಗಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಸ್ಪಷ್ಟ ಹಾಗೂ ದೃಢವಾಗಿ ನಿರ್ಧರಿಸಿದೆ. ಈ ನಿರಂತರ ಮತ್ತು ದೀರ್ಘಕಾಲದ ಸುಸ್ತಿದಾರರ ವಿರುದ್ಧ ಬಿಬಿಎಂಪಿಯ ಈ ಅಭಿಯಾನದಲ್ಲಿ ನೈತಿಕವಾಗಿ ಬೆಂಬಲಿಸಲು ತಮ್ಮಲ್ಲಿ ಕೋರಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment