ತೆರಿಗೆ ಪಾವತಿಸದೇ ನಗರದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿದ್ದ 30 ಐಷಾರಾಮಿ ವಾಹನಗಳನ್ನು ಬೆಂಗಳೂರು ಸಾರಿಗೆ ಇಲಾಖೆ ಅಧಿಕಾರಿಗಳು ಜಫ್ತಿ ಮಾಡಿದ್ದಾರೆ.
ಭಾನುವಾರ ವಾಹನ ತಪಾಸಣೆಗೆ ಇಳಿದ ಸಾರಿಗೆ ಇಲಾಖೆ ಅಧಿಕಾರಿಗಳು ನಗರದಲ್ಲಿ ಸಂಚರಿಸುತ್ತಿದ್ದ ಫೆರಾರಿ, ಪೋರ್ಷೆ, ಬಿಎಂಡಬ್ಲೂ, ಬೆಂಜ್, ಔಡಿ, ಔಸ್ಟಿನ್, ರೇಂಜ್ ರೋವರ್ ಸೇರಿದಂತೆ 30 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡಿರುವ ಕಾರುಗಳ ಮಾಲೀಕರು ಸುಮಾರು 3 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಪಾವತಿಗೆ ನೊಟೀಸ್ ನೀಡಲಾಗಿದೆ.
ಸಾರಿಗೆ ಉಪ ಆಯುಕ್ತರಾದ ಸಿ. ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾಧ ಬಿ. ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Leave a Reply