ಸಾಲಬಾಧೆ ತಾಳಲಾರದೇ ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಸದಾಶಿವನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪತಿ ಅನೂಪ್ ಕುಮಾರ್, ಪತ್ನಿ ರಾಖಿ, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿಯದೇ ಇದ್ದರೂ ಸಾಲಬಾಧೆ ತಾಳಲಾರದೇ ಈ ನಿರ್ಧಾರ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಮಕ್ಕಳಿಗೆ ವಿಷ ನೀಡಿದ ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಅನೂಪ್ ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಹೆಣ್ಣು ಮಗುವಿಗೆ ಸ್ವಲ್ಪ ಆರೋಗ್ಯ ಸಮಸ್ಯೆ ಕಾಡುತ್ತಿತ್ತು ಎಂದು ತಿಳಿದು ಬಂದಿದೆ.
ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.