Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

BPL CARD ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್ ಅಭಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
dk shivakumar

ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಹರ ಬಿಪಿಎಲ್ ಕಾರ್ಡ್ ಗಳು ಕೂಡ ರದ್ದಾಗುತ್ತಿವೆ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.

ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರ್ಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಕಾರ್ಡ್ ನೀಡುವಾಗ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ, ಅದೇ ರೀತಿ ಕಾರ್ಡ್ ರದ್ದು ಮಾಡುವಾಗ ಮಾಡಬಹುದಲ್ಲವೇ ಎಂದು ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಂಬಂಧಪಟ್ಟ ಸಚಿವರ ಜತೆ ಚರ್ಚೆ ಮಾಡಿ ನಿರ್ದೇಶನ ನೀಡಿದ್ದಾರೆ. ಯಾರ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂದು ಆಯಾ ಕ್ಷೇತ್ರಗಳ ಶಾಸಕರಿಗೆ ಪಟ್ಟಿ ರವಾನಿಸುತ್ತೇವೆ. ಅವರು ಒಂದು ತಂಡ ರಚಿಸಿ ಯಾವ ಅರ್ಹರಿಗೆ ಕಾರ್ಡ್ ರದ್ದಾಗಿದೆ ಎಂದು ಪರಿಶೀಲನೆ ಮಾಡುತ್ತಾರೆ. ಇನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ತಂಡದವರಿಗೂ ಮನೆ ಮನೆಗೆ ಹೋಗಿ, ಯಾರಿಗಾದರೂ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸುವಂತೆ ಜವಾಬ್ದಾರಿ ನೀಡಲಾಗುವುದು” ಎಂದು ತಿಳಿಸಿದರು.

ಕೆಲವು ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಿರುವ ಬಗ್ಗೆ ಕೇಳಿದಾಗ, “ಈ ವಿಚಾರವನ್ನು ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ” ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಹಾಲಿನ ವಿಚಾರವಾಗಿ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ನಮ್ಮ ನಂದಿನಿ ಹಾಲಿನ ಮಾರುಕಟ್ಟೆ ವಿಸ್ತರಿಸಲು ತೆರಳುತ್ತಿದ್ದಾರೆ. ನಾನು ಕೂಡ ಇದಕ್ಕೆ ತೆರಳಬೇಕಾಗಿತ್ತು. ಆದರೆ ನಾಳೆ ಮೀನುಗಾರರ ದಿನ ಕಾರ್ಯಕ್ರಮ ಇರುವುದರಿಂದ ನಾನು ಮುರುಡೇಶ್ವರಕ್ಕೆ ತೆರಳುತ್ತಿದ್ದೇನೆ. ನಂದಿನಿ ಹಾಲಿಗೆ ಮಾರುಕಟ್ಟೆ ವಿಸ್ತರಣೆ ಮಾಡಿದರೆ ನಮ್ಮ ರೈತರಿಗೆ ನೆರವಾಗುತ್ತದೆ. ಹೀಗಾಗಿ ಈ ಭೇಟಿಗೂ ರಾಜಕೀಯಕ್ಕೂ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ನಕ್ಸಲ್ ನಾಯಕ ವಿಕ್ರಂ ಗೌಡ ಅವರ ಎನ್ ಕೌಂಟರ್ ಖಂಡಿಸಿ ಎಡಪಂಥೀಯರು ಸರ್ಕಾರದ ವಿರುದ್ಧ ನಿಂತಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಗೃಹಮಂತ್ರಿಗಳು ಪ್ರತಿಕ್ರಿಯೆ ನೀಡಲಿದ್ದಾರೆ” ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment