Home ಬೆಂಗಳೂರು ವರ್ಷದ ಕೊನೆಯಲ್ಲಿ ಖರ್ಚು ಮಾಡುವ ಅಸಹ್ಯ ಅಭ್ಯಾಸ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಚಾಟಿ

ವರ್ಷದ ಕೊನೆಯಲ್ಲಿ ಖರ್ಚು ಮಾಡುವ ಅಸಹ್ಯ ಅಭ್ಯಾಸ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಚಾಟಿ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡರು.

by Editor
0 comments
karnataka cm siddaramiah

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡರು.

ಬೆಂಗಳೂರಿನಲ್ಲಿ ಮಂಗಳವಾರ ಸುಮಾರು ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು, ವರ್ಷದ ಕೊನೆ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದಕ್ಕಾ ನೀವು ಇರುವುದು ಎಂದು ಖಾರವಾಗಿ ಪ್ರಶ್ನಿಸಿದರು.

ಅಧಿಕಾರಿಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡಿ ಹಣ ಬಳಕೆ ಮಾಡದೇ ಉಳಿಸಿಕೊಂಡಿರುವುದಕ್ಕೆ ಮಾಹಿತಿ ಪಡೆಯಿರಿ. ಒಂದು ವೇಳೆ ಸೂಕ್ತ ಉತ್ತರ ಬಾರದೇ ಇದ್ದರೆ ಅಂತಹ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸೂಚಿಸಿದರು.

2024-25 ನೇ ಸಾಲಿನಲ್ಲಿ ಆಯವ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ರೂ. 5,377 ಕೋಟಿ ಅನುದಾನ ಒದಗಿಸಲಾಗಿದೆ. ಇದುವರೆಗೆ ಅನುದಾನ ರೂ.3,631 ಕೋಟಿ ಬಿಡುಗಡೆಯಾಗಿದ್ದು ಈ ಹಣ ಕೂಡ ಪೂರ್ತಿ ಖರ್ಚು ಮಾಡದ ಬಗ್ಗೆ ತೀವ್ರವಾಗಿ ಪ್ರಶ್ನಿಸಿದರು.

banner

ಅಂಬೇಡ್ಕರ್ ನಿಗಮದಲ್ಲಿ 900 ಕೋಟಿ, ಭೋವಿ ನಿಗಮದಲ್ಲಿ 107 ಕೋಟಿ ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡದ ನಿಗಮದ ಎಂಡಿ ಗಳಿಗೆ ನೋಟಿಸ್ ನೀಡಿ, ಅಗತ್ಯ ಬಿದ್ದರೆ ಸಸ್ಪೆಂಡ್ ಮಾಡುವಂತೆ ಖಡಕ್ ಸೂಚನೆ ನೀಡಿದರು.

ಇಲಾಖೆಗೆ ಸರ್ಕಾರದಿಂದ ಕೊಟ್ಟ ಹಣದಲ್ಲಿ 2,892 ಕೋಟಿ ಮಾತ್ರ ವೆಚ್ಚ ಮಾಡಲಾಗಿದೆ. ಉಳಿದದ್ದು ಹಾಗೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮಾರ್ಚ್ ಅಂತ್ಯದ ವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬೆಂಗಳೂರಿನಲ್ಲಿ ಭೀಕರ ಘಟನೆ : ಪತ್ನಿ, ಇಬ್ಬರು ಮಕ್ಕಳ ಕೊಂದ ಪತಿ! ದೇಶಾದ್ಯಂತ ವಾಹನ ಅಪಘಾತದ ಗಾಯಾಳುಗಳಿಗೆ ಉಚಿತ ಚಿಕಿತ್ಸೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ 20,000 ರೂ.ಗೆ 18 ದಿನ ಉತ್ತರ ಭಾರತ ಪ್ರವಾಸ: MSIL ಟೂರ್ ಪ್ಯಾಕೇಜ್ ಗೆ ಚಾಲನೆ ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: ಹೆಚ್ಚುವರಿ 2 ಗಂಟೆ ವಿದ್ಯುತ್ ಪೂರೈಸಲಿರುವ ರಾಜ್ಯ ಸರ್ಕಾರ! ಮೈಸೂರಿನಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆಗೆ ಕೇಂದ್ರ ಒಪ್ಪಿಗೆ ನಟಿ ಜಯಂತಿ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ ರೋಹಿತ್, ಕೊಹ್ಲಿಗೆ ಚಾಂಪಿಯನ್ಸ್ ಟ್ರೋಫಿ ಕೊನೆ? ಟಿಬೆಟ್-ನೇಪಾಳ ಗಡಿಯಲ್ಲಿ ಭೂಕಂಪ; 126ಕ್ಕೇರಿದ ಸಾವಿನ ಸಂಖ್ಯೆ 200 ಮಂದಿಗೆ ಗಾಯ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಡಿನ್ನರ್ ಪಾರ್ಟಿ ರದ್ದುಗೊಳಿಸಿದ ಜಿ.ಪರಮೇಶ್ವರ್ ಕಾರು ರೇಸ್ ಅಭ್ಯಾಸದ ವೇಳೆ ಅಪಘಾತ: ನಟ ಅಜಿತ್ ಕುಮಾರ್ ಪಾರು!