Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಬೆಂಗಳೂರು

ಬೆಂಗಳೂರು ಕೆರೆಗಳ ನೀರು ಕುಡಿಯಲು, ‌ಸ್ನಾನ ಮಾಡಲು ಅಲ್ಲ: ಡಿಕೆ ಶಿವಕುಮಾರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 35 ವೀಕ್ಷಣೆಗಳು
dk shivakumar

ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯು ಬೆಂಗಳೂರು ಕೆರೆಗಳ ನೀರು ಕುಡಿಯಲು ಅರ್ಹವಲ್ಲ ಎಂಬ ವರದಿಗೆ ಪ್ರತಿಕ್ರಿಯಿಸಿದರು.

ಈ ಕೆರೆಗಳು ಇರುವುದು ಅಂತರ್ಜಲ ಹೆಚ್ಚಳ ಮಾಡಲು. ತಿಪ್ಪಗೊಂಡನಹಳ್ಳಿ ಕೆರೆ ನೀರನ್ನು ಬಿಡ್ಬ್ಯೂ ಎಸ್ ಎಸ್ ಬಿಯಿಂದ ಶುದ್ದಿ ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ನೀರು ಕುಡಿಯಲು, ಸ್ನಾನ‌ಮಾಡಲು ಅಲ್ಲ ಎಂದು ಅವರು ಹೇಳಿದರು.

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಮೊಬೈಲ್ ನಿಷೇಧಕ್ಕೆ ಪೋಷಕರಿಂದಲೇ ಒತ್ತಡ

ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆ” ಎಂದು ಅವರು ಹೇಳಿದರು.

ಸಚಿವ ಮಹದೇವಪ್ಪ ಅವರು ದಲಿತ ಸಿಎಂ ವಿಚಾರ ಮಂಡಿಸಿರುವ ಬಗ್ಗೆ ಕೇಳಿದಾಗ, “ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ” ಎಂದರು.

ವಿಬಿ ಗ್ರಾಮ್ ಜೀ ವಿಚಾರವಾಗಿ ಕೇಳಿದಾಗ, “ವಿಬಿ ಗ್ರಾಮ್ ಜೀ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ. ಹಾಗೂ ಯಾವುದೇ ನಿರ್ದೇಶನ ನೀಡಿಲ್ಲ. ಈ ಹಿಂದೆ ಕೂಲಿ ಮಾಡಿದವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಯ್ದೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದ್ದೇವೆ. ಚಿಕ್ಕಬಳ್ಳಾಪುರದಲ್ಲಿ ನರೇಗಾ ಬಚಾವ್ ಆದೋಂಲನ ಹೋರಾಟ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು‌.

 

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment