Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಬೆಂಗಳೂರು

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ 1.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು: ಡಿ ಗ್ರೂಪ್‌ ನೌಕರ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 35 ವೀಕ್ಷಣೆಗಳು
vidhana souda
vidhana souda

ಬೆಂಗಳೂರು: ಶಕ್ತಿಸೌಧ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಸುರೇಶ್‌ ಅವರ ಕಚೇರಿಯಲ್ಲೇ‌ 1.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಡಿ ಗ್ರೂಪ್‌ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲಸದ ನಿಮಿತ್ತ ಸಚಿವರ ಕಚೇರಿಗೆ ನವೀನ್ ಎಂಬವರು ಚಿನ್ನಾಭರಣ ಹಾಗೂ ನಗದು ಇದ್ದ ಕೈ ಚೀಲದೊಂದಿಗೆ ಬಂದಿದ್ದರು. ಕೆಲಸ ಮುಗಿಸಿದ ನಂತರ ಮರಳುವಾಗ ಕೈ ಚೀಲವನ್ನು ಮರೆತು ಹೋಗಿದ್ದರು.

ಮಾರನೇ ದಿನ ಬಂದು ನೋಡಿದಾಗ ಕೈ ಚೀಲ ನಾಪತ್ತೆಯಾಗಿತ್ತು. 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕ್ಯಾಶ್ ಇದ್ದ ಕೈ ಚೀಲ ಕಳ್ಳತನವಾದ ಬೆನ್ನಲ್ಲೇ ಗಾಬರಿಗೊಂಡ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಚಿವರ ಕಚೇರಿಯಲ್ಲೇ ಕಳ್ಳತನ ನಡೆದ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ವಿಧಾನಸೌಧದ ಆಡಳಿತಾತ್ಮಕ ಮತ್ತು ಭದ್ರತಾ ವಿಷಯಗಳಿಗೆ ಸಂಬಂಧಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಡಿ ಗ್ರೂಪ್ ನೌಕರನ ಪಾತ್ರ ಗೊತ್ತಾಗಿ ಬಂಧಿಸಲಾಗಿದೆ.

ನೌಕರ ಕೈ ಚೀಲ ಹಿಡಿದುಕೊಂಡು ಹೋಗುವುದು ಸಿಸಿಟಿವಿಯಲ್ಲಿ ಪತ್ತೆಯಾದ ಬೆನ್ನಲ್ಲೇ ವಿಧಾನಸೌಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದರೂ ಈಗ ಹಲವು ಪ್ರಶ್ನೆಗಳು ಎದ್ದಿದೆ.

ಪರಿಶೀಲನೆ ನಡೆಸದೇ ಚಿನ್ನಾಭರಣ, ನಗದನ್ನು ವಿಧಾನಸೌಧದ ಒಳಗಡೆ ಭದ್ರತಾ ಸಿಬ್ಬಂದಿ ಬಿಟ್ಟಿದ್ದು ಯಾಕೆ? ಮೆಟಲ್ ಡಿಟೆಕ್ಟರ್, ತಪಾಸಣೆ ಕೇವಲ ನೆಪಕ್ಕೆ ಮಾತ್ರ ಇದೆಯೇ? ಸಚಿವರ ಕಚೇರಿಯಲ್ಲಿನ ಕಳ್ಳತನ ಭದ್ರತಾ ವೈಫಲ್ಯದ ಪ್ರತೀಕವೇ ಎಂಬ ಗಂಭೀರ ಪ್ರಶ್ನೆ ಎದ್ದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment