Thursday, December 25, 2025
Google search engine
Homeಕಾನೂನುನವೆಂಬರ್ ನಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರ ಮಾಹಿತಿ

ನವೆಂಬರ್ ನಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರ ಮಾಹಿತಿ

ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳಿಗೆ ನವೆಂಬರ್​ನಲ್ಲಿ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿದಾವಿತ್ ಸಲ್ಲಿಸಿದೆ. ಈ ಮೂಲಕ ನೆನೆಗುದಿಗೆ ಬಿದ್ದಿರುವ ಪಾಲಿಕೆ ಚುನಾವಣೆ ವರ್ಷಾಂತ್ಯದಲ್ಲಿ ನಡೆಯುವುದು ಬಹುತೇಕ ಖಚಿತವಾದಂತೆ ಆಗಿದೆ.

ನವೆಂಬರ್ ಅಥವಾ ಸಾಧ್ಯವಾದರೆ ನವೆಂಬರ್ ಗೂ ಮುನ್ನವೇ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬರುವ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರ ಶುಕ್ರವಾರ ಸುಪ್ರೀಂಕೋರ್ಟ್ ಗೆ ವರದಿ ನೀಡಿದೆ. ಅಫಿದಾವಿತ್ ಸ್ವೀಕರಿಸಿದ ಸುಪ್ರೀಂಕೋರ್ಟ್ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್​​ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ವಿಭಾಗೀಯ ಪೀಠ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಲಿಖಿತ ಉತ್ತರ ನೀಡುವಂತೆ ಸೂಚಿಸಿದೆ.

ಬಿಬಿಎಂಪಿ ವಾರ್ಡ್​​ ವಿಭಜನೆ, ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಅಫಿಡವಿಟ್‌ನಲ್ಲಿ ಇವೆ. ನವೆಂಬರ್ ವೇಳೆಗೆ ಎಲ್ಲ ಪ್ರಕ್ರಿಯೆ ಮುಗಿಸುವುದಾಗಿ ಮಾಹಿತಿ ನೀಡಿದ್ದು, ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ತಿಳಿಸಲಾಗಿದೆ. ಈ ಹಿಂದಿನ ಬಿಬಿಎಂಪಿಯ ಸದಸ್ಯರ ಅಧಿಕಾರ ಅವಧಿ 2020 ಸೆಪ್ಟೆಂಬರ್ 10ರಂದು ಮುಕ್ತಾಯಗೊಂಡಿತ್ತು.

ಡಿಸೆಂಬರ್ 18ರಂದು ಅಂಗೀಕರಿಸಲಾದ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020ರ ಅಡಿ ಕಡ್ಡಾಯವಾಗಿ 243 ವಾರ್ಡ್‌ಗಳ ಬದಲಿಗೆ 198 ವಾರ್ಡ್‌ಗಳಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments