Wednesday, December 24, 2025
Google search engine
Homeಬೆಂಗಳೂರು30 ಕೋ. ವೆಚ್ಚದಲ್ಲಿ ಹೆಬ್ಬಾಳ ಪಾರ್ಕುಗಳ ಅಭಿವೃದ್ಧಿ: ಸಚಿವ ಭೈರತಿ ಸುರೇಶ್

30 ಕೋ. ವೆಚ್ಚದಲ್ಲಿ ಹೆಬ್ಬಾಳ ಪಾರ್ಕುಗಳ ಅಭಿವೃದ್ಧಿ: ಸಚಿವ ಭೈರತಿ ಸುರೇಶ್

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ಉದ್ಯಾನಗಳನ್ನು 30 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತಿಳಿಸಿದ್ದಾರೆ.‌

ಹೆಬ್ಬಾಳದಲ್ಲಿ ಬುಧವಾರ ಜನಸ್ಪಂದನಾ ಕಾರ್ಯಕ್ರಮದಲ್ಲಿ ನಾಗರಿಕರಿಂದ ಅಹವಾಲುಗಳನ್ನು ಆಲಿಸಿದರು.
ಕ್ಷೇತ್ರದಲ್ಲಿ ಇತ್ತೀಚಿಗೆ ಎರಡು ದಿನಗಳ ಆಯೋಜಿಸಲಾಗಿದ್ದ ಇ-ಖಾತಾ ವಿತರಣೆ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿತ್ತು. ಇನ್ನೂ ಅನೇಕ ಜನರು ತಮ್ಮ ಆಸ್ತಿಗಳಿಗೆ ಇ-ಖಾತ ಪಡೆಯುವುದು ಬಾಕಿ ಇದ್ದು, ಅವರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಇ-ಖಾತೆಯನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಜಯನಗರ ಮುಖ್ಯರಸ್ತೆಗೆ 32 ಕೋಟಿ ರೂಪಾಯಿ ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಸಲಾಗುತ್ತದೆ. ಇದರಲ್ಲಿ ವಿಶೇಷವೆಂದರೆ ರಸ್ತೆಯ ಇಕ್ಕೆಲಗಳಲ್ಲಿ ಅಲ್ಲಲ್ಲಿ ಇಂಗುಗುಂಡಿಗಳ ಸಹಿತ ವೈಟ್ ಟ್ಯಾಪಿಂಗ್ ಮಾಡಲಾಗುತ್ತದೆ. ಸದ್ಯದಲ್ಲೇ ಇದರ ಕಾಮಗಾರಿ ಆರಂಭಿಸಲಿದ್ದು, ಕ್ಷೇತ್ರದ ಬಹುತೇಕ ರಸ್ತೆಗಳನ್ನು ಡಾಂಬರೀಕರಣಗೊಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಪಾರ್ಕುಗಳ ಅಭಿವೃದ್ಧಿಗೆ 30 ಕೋ. ರೂ.

ಕ್ಷೇತ್ರದ ಎಲ್ಲಾ ವಾರ್ಡುಗಳಲ್ಲಿರುವ ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ರೂಪುರೇಶೆಗಳನ್ನು ಸಿದ್ಧಪಡಿಸಲಾಗಿದ್ದು, ಹಂತಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲಾಗುತ್ತದೆ. ಇದಕ್ಕಾಗಿ ಸರ್ಕಾರದಿಂದ 30 ಕೋಟಿ ರೂಪಾಯಿ ಮಂಜೂರಾಗಿದೆ ಎಂದು ತಿಳಿಸಿದ ಅವರು, ಉದ್ಯಾನಗಳಲ್ಲಿ ಅಗತ್ಯ ವಿದ್ಯುದ್ದೀಪಗಳು, ವಾಕಿಂಗ್ ಟ್ರ್ಯಾಕ್, ಲಾನ್ ಸೇರಿದಂತೆ ಇನ್ನಿತರೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು.

ಒಳಚರಂಡಿ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ. ಯಾವುದೇ ಕಾರಣಕ್ಕೂ ನಾಗರಿಕರ ಸಮಸ್ಯೆಗಳ ಪರಿಹಾರದಲ್ಲಿ ವಿಳಂಬ ಮಾಡಬಾರದು. ಸಮಸ್ಯೆಗಳ ಬಗ್ಗೆ ದೂರುಗಳು ಬಂದ ತಕ್ಷಣ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ನಾಗರಿಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments