Thursday, December 25, 2025
Google search engine
Homeಬೆಂಗಳೂರುಕೊಲೆಗೂ ನನಗೂ ಸಂಬಂಧವಿಲ್ಲ: ಬಿಜೆಪಿ ಶಾಸಕ ಭೈರತಿ ಬಸವರಾಜ್

ಕೊಲೆಗೂ ನನಗೂ ಸಂಬಂಧವಿಲ್ಲ: ಬಿಜೆಪಿ ಶಾಸಕ ಭೈರತಿ ಬಸವರಾಜ್

ರೌಡಿ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಕಾನೂನು ಹೋರಾಟ ನಡೆಸುವೆ ಎಂದು ಬೆಂಗಳೂರಿನ ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹೇಳಿದರು.

ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಅವರು, ಕೊಲೆಯಾದವನು ಮತ್ತು ಕೊಲೆ ಮಾಡಿದ ಆರೋಪಿಗಳು ನನಗೆ ಗೊತ್ತಿಲ್ಲ. ದೂರು ನೀಡಿದವರು ನನಗೆ ಗೊತ್ತಿಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ ಎಫ್‌ಎಆರ್ ದಾಖಲಿಸಬಹುದೇ ಎಂದು ಪ್ರಶ್ನಿಸಿದರು.

ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತರ ನನಗೆ ಈ ವಿಚಾರ ಗೊತ್ತಾಯಿತು. ನನಗೆ ಸಂಬಂಧ ಇಲ್ಲದ ಪ್ರಕರಣದಲ್ಲಿ ನನ್ನ ಹೆಸರು ಬಂದಿದೆ. ಎಫ್‌ಐಆರ್‌ನಿಂದ ನನ್ನ ಹೆಸರು ತೆಗೆಯಲು ನಾನು ಕಾನೂನು ಸಮರ ಮಾಡುತ್ತೇನೆ. ಗೃಹ ಸಚಿವ ಪರಮೇಶ್ವರ್‌ ಅವರಿಗೂ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಪೊಲೀಸರು ವಿಚಾರಣೆಗೆ ಕರೆದರೆ ಹೋಗುತ್ತೇನೆ. ವಿಚಾರಣೆಗೆ ಹಾಜರಾಗುತ್ತೇನೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬಂತು ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments