Thursday, December 25, 2025
Google search engine
Homeಬೆಂಗಳೂರುಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು

ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರ ಬೆಂಗಳೂರು ಅಭಿವೃದ್ಧಿ ಗೊಳಿಸುವ ಕನಸನ್ನು ನನಸು ಮಾಡಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments