Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಬೆಂಗಳೂರು

5678 ಎಕರೆ ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರ್ಷದಲ್ಲಿ 10 ಲಕ್ಷ ಜನರಿಗೆ ನೀರು ಪೂರೈಸುವ ಸಾಮರ್ಥ್ಯವಿರುವ ಹೆಸರುಘಟ್ಟ ಕೆರೆಗೆ ಗೃಹ ತ್ಯಾಜ್ಯವಾಗಲೀ, ಕೈಗಾರಿಕಾ ತ್ಯಾಜ್ಯವಾಗಲೀ ಸೇರದಂತೆ ಎಚ್ಚರಿಕೆ ವಹಿಸಬೇಕು, ಅರ್ಕಾವತಿ ನದಿ ಮಲಿನವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ನೈಸರ್ಗಿಕವಾಗಿ ಬೆಳೆದಿರುವ ಹುಲ್ಲುಗಾವಲಿನ ಸಂರಕ್ಷಣೆಯ ಜೊತೆಗೆ ಸಂವರ್ಧನೆಯನ್ನೂ ಮಾಡಬೇಕು, ಸುತ್ತಮುತ್ತಲ ಗ್ರಾಮಗಳ ಜನರ ದನಕರು, ಮೇಕೆ ಮೇಯಲು ಮುಕ್ತ ಅವಕಾಶ ಇರಬೇಕು, ಸ್ಥಳೀಯ ಗ್ರಾಮ ಪಂಚಾಯ್ತಿಗಳ ಮತ್ತು ಸಾರ್ವಜನಿಕರ ಸಹಕಾರ ಪಡೆದು ಈ ಪ್ರದೇಶ ಸಂರಕ್ಷಣೆ ಮಾಡುವಂತೆ ತಿಳಿಸಿದರು.

ಹುಲ್ಲುಗಾವಲು ಪಕ್ಷಿಗಳ ಸಂತಾನೋತ್ಪತ್ತಿಗೆ ಮಹತ್ವದ ತಾಣಗಳಾಗಿದ್ದು, ಇಲ್ಲಿ ಜಲ ಮೂಲಗಳೂ ಇರುವ ಹಿನ್ನೆಲೆಯಲ್ಲಿ ಪಕ್ಷಿಗಳಿಗೆ ಗೂಡು ಕಟ್ಟಲು ಹೊಳೆ ಮತ್ತಿ ಹಾಗೂ ಆಹಾರಕ್ಕಾಗಿ ಹಣ್ಣಿನ ಗಿಡಗಳು ಸೇರಿದಂತೆ ವಿವಿಧ ಸ್ಥಳೀಯ ಪ್ರಭೇದದ ಮರಗಿಡಗಳನ್ನು ಸುತ್ತಲೂ ಬೆಳೆಸುವಂತೆ ನಿರ್ದೇಶನ ನೀಡಿದರು.

ಸಣ್ಣ ನೀರಾವರಿ ಇಲಾಖೆ, ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಹೆಸರುಘಟ್ಟ ಪ್ರದೇಶದ ಸಮಗ್ರ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸಿಎಸ್ಆರ್ ನಿಧಿ ಬಳಕೆ ಮಾಡಿಕೊಳ್ಳಲು ಮತ್ತು ಅರಣ್ಯ ಇಲಾಖೆಯಿಂದ ಇದಕ್ಕಾಗಿ ಹಣ ಮೀಸಲಿಡಲು ಕಾರ್ಯಯೋಜನೆ ರೂಪಿಸುವಂತೆ ಸ್ಥಳದಲ್ಲಿ ಹಾಜರಿದ್ದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥ ಮೀನಾಕ್ಷಿ ನೇಗಿ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಎಪಿಸಿಸಿಎಫ್ ಕುಮಾರ್ ಪುಷ್ಕರ್, ಬೆಂಗಳೂರು ಡಿಸಿಎಫ್ ರವೀಂದ್ರ ಕುಮಾರ್ ಎನ್. ಮತ್ತಿತರರು ಹಾಜರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment