Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಬೆಂಗಳೂರು

ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆಜೆ ಜಾರ್ಜ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
kj george

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಹಾಗೂ ಶಾಸಕ ಕೆ.ಜೆ.ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ.

ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ ಯೋಜನೆಗಳನ್ನು ಸಮರ್ಪವಾಗಿ ಜನರಿಗೆ ತಲುಪಿಸುವದರ ಜತೆಗೆ ಅನುಷ್ಠಾನವಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಈ ಕಚೇರಿ ಸ್ಥಾಪಿಸುತ್ತಿರುವುದಾಗಿ ಹೇಳಿದರು.

ಇದಕ್ಕೂ ಮೊದಲು ಗಾಂಧೀನಗರ 2ನೇ ಹಂತದಲ್ಲಿ ಕೈಗೊಳ್ಳುತ್ತಿರುವ 300 ಎಂಎಂ ವ್ಯಾಸದ ಒಳಚರಂಡಿ ನೂತನ ಮಾರ್ಗದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಕ್ಷೇತ್ರದ ಜನರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ತೊಂದರೆಗಳನ್ನು ನಿವಾರಿಸುವ ಭರವಸೆ ನೀಡಿದರು. ಕುಡಿಯುವ ನೀರು ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ಕ್ಷೇತ್ರದ ಜನರು ವಿವರಿಸಿದಾಗ, ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣವೇ ಸರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ವಿನೋಭ ನಗರ, ಕೆ.ಜಿ.ಹಳ್ಳಿಯಲ್ಲಿ ಸಾಮಾಜಿಕ ಕಾರ್ಯದಲ್ಲಿ ನಿರತವಾಗಿರುವ ಮೈತ್ರಿ ಸರ್ವ ಸೇವಾ ಸಂಸ್ಥೆ ಮತ್ತು ಯುನೈಟೆಡ್ ವೇ ವತಿಯಿಂದ ಹೊಲಿಗೆ ಯಂತ್ರಗಳನ್ನು ಸಚಿವ ಕೆ.ಜೆ.ಜಾರ್ಜ್ ವಿತರಿಸಿದರು. ಸಂಸ್ಥೆಯು ಆರ್ಥಿಕ ಸಬಲೀಕರಣದ ಭಾಗವಾಗಿ 35 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವೀಕ್ಷಿಸಿದ ಅವರು, ಮಕ್ಕಳಿಗೆ ಶುಭಹಾರೈಸಿದರು.

ಇತ್ತೀಚೆಗೆ ನಿಧನರಾದ ಗಾಂಧೀನಗರ 2ನೇ ಹಂತದ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಕೇಶವನ್ ಮತ್ತು ಕಾಡುಗೊಂಡನಹಳ್ಳಿಯ ದಿವಂಗತ ಹಿರಿಯ ಕಾಂಗ್ರೆಸ್ ಮುಖಂಡ ಮುನಿಸ್ವಾಮಿ ಅವರ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಇತ್ತೀಚೆಗೆ ನಡೆದ ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ತಂಡ ಪಾಲ್ಗೊಡು ಮೂರನೇ ಸ್ಥಾನ ಗಳಿಸಿದ್ದು, ಈ ತಂಡದ ಸದಸ್ಯರಾಗಿದ್ದ ಸರ್ವಜ್ಞನರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿ ನಿವಾಸಿ ಬಲರಾಂ ಬಿ. ಅವರು ತಮ್ಮ ಈ ಸಾಧನೆಗೆ ಸಹಾಯಹಸ್ತ ಚಾಚಿದ್ದ ಸಚಿ ಕೆ.ಜೆ.ಜಾರ್ಜ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ಗಾಗಿ ತರಬೇತಿ ಮತ್ತು ಕಾಬೋಡಿಯಾಕ್ಕೆ ತೆರಳಲು ಸಚಿವ ಜಾರ್ಜ್ ಅವರು ಹಣಕಾಸಿನ ಸಹಾಯ ಮಾಡಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಕೃತಜ್ಞತೆ ಹೇಳಲು ಬಂದಿರುವುದಾಗಿ ಬಲರಾಂ ತಿಳಿಸಿದರು. ಈ ವೇಳೆ ಸಚಿವರು ಸಾಧಕ ಕ್ರೀಡಾಪಟುವಿಗೆ ಮೆಡಲ್ ಹಾಕುವ ಮೂಲಕ ಶುಭಕೋರಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment