ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಫೆಬ್ರವರಿ 1ರಿಂದ 14ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಏರ್ ಶೋ ನಡೆಯಲಿದೆ.
ಏರ್ ಶೋ-2025 ನಡೆಯುತ್ತಿರುವ ಪ್ರಯುಕ್ತ ಯಲಹಂಕ ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್ಗಳ ಎತ್ತರವನ್ನು ದಿನಾಂಕ: 01.02.2025 ರಿಂದ 14.02.2025 ರವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು/ಅಭಿವೃದ್ಧಿದಾರರಿಗೆ ಈ ಮೂಲಕ ತಿಳಿಯಪಡಿಸಿದೆ.
ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ಬೃಹತ್ ಕಟ್ಟಡಗಳು, ಮೇಲಿನ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಏರ್‌ಕ್ರಾಪ್ಟ್ 1937ರ ರೂಲ್ 91 ರೀತ್ಯಾ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ನಗರ ಯೋಜನೆ-ಉತ್ತರ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿರುತ್ತಾರೆ.