ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಎರಡು ಬೈಕ್ ಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಬ್ ಇನ್ ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ರಾಮನಗರದಲ್ಲಿ ಸಂಭವಿಸಿದೆ.
ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಬ್ ಇನ್ ಸ್ಪೆಕ್ಟರ್ ನಾಗರಾಜು ಸ್ಥಳದಲ್ಲೇ ಅಸುನೀಗಿದ್ದಾರೆ.
ರಸ್ತೆ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಕೆಎಸ್ಸಾರ್ಟಿಸಿ ಬಸ್ ಯದ್ವಾತದ್ವಾ ಚಲಿಸಿ ಹಳ್ಳಕ್ಕೆ ಮುಗುಚಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


