ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಪುನರ್ ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಾವಣೆ ಮಾಡಿದರೂ ರಾಮನಗರ ಜಿಲ್ಲಾ ಕೇಂದ್ರವಾಗಿ ಉಳಿಯಲಿದೆ. ಆಡಳಿತಾತ್ಮಕವಾಗಿ ಯಾವುದೆ ಬದಲಾವಣೆ ಇಲ್ಲ ಎಂದು ಅವರು ಹೇಳಿದರು.
ಮೂಲ ಅದು ಬೆಂಗಳೂರು ಜಿಲ್ಲೆಯಾಗಿತ್ತು. ಇಂದಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಪುನರ್ ನಾಮಕಾರಣ ಮಾಡಲು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವ ಪ್ರಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು. ಅಲ್ಲದೇ ಕೇಂದ್ರ ಸರ್ಕಾರ ಕೂಡ ಹೆಸರು ಬದಲಾವಣೆ ಪ್ರಸ್ತಾಪ ತಿರಸ್ಕರಿಸಿತ್ತು. ಇದೀಗ ರಾಜ್ಯ ಸರ್ಕಾರ ಹೆಸರು ಬದಲಾವಣೆ ತೀರ್ಮಾನ ಕೈಗೊಳ್ಳುವ ಮೂಲಕ ಕೇಂದ್ರಕ್ಕೆ ಸೆಡ್ಡು ಹೊಡೆದಿದೆ.


