Home ಬೆಂಗಳೂರು ಬೆಂಗಳೂರಿನ ಸರ್ಜಾಪುರದಲ್ಲಿ ತಲೆ ಎತ್ತಲಿದೆ `ಸ್ವಿಫ್ಟ್ ಸಿಟಿ’!

ಬೆಂಗಳೂರಿನ ಸರ್ಜಾಪುರದಲ್ಲಿ ತಲೆ ಎತ್ತಲಿದೆ `ಸ್ವಿಫ್ಟ್ ಸಿಟಿ’!

ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT- Startup, Work-Spaces, Intelligence, Finance & Technology) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಮುಂದಾಗಿದ್ದಾರೆ.

by Editor
0 comments
bengaluru city

ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT- Startup, Work-Spaces, Intelligence, Finance & Technology) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಮುಂದಾಗಿದ್ದಾರೆ.

ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ. ಇದನ್ನು ಸಾಧಿಸಲು ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಅವರು ತಮ್ಮ ಮಹತ್ವಾಕಾಂಕ್ಷೆಯನ್ನು ಹಂಚಿಕೊಂಡಿದ್ದಾರೆ.

ಮೂಲಭೂತವಾಗಿ ನಾವೀನ್ಯತೆ ಮತ್ತು ಬೆಳವಣಿಗೆಗಳ ಆಡುಂಬೊಲವನ್ನಾಗಿ ಬೆಳೆಸಬೇಕು ಎನ್ನುವುದು ಅವರ ದೂರದೃಷ್ಟಿಯಾಗಿದೆ.

‘ಬೆಂಗಳೂರಿನಲ್ಲಿ ಇಂದು ಸಾವಿರಾರು ಕಂಪನಿಗಳಿವೆ, ನಿಜ. ಆದರೆ ಇವುಗಳಿಗೆ ಯೋಜಿತ ಮತ್ತು ವ್ಯವಸ್ಥಿತ ತಾಣಗಳಿಲ್ಲ ಎನ್ನುವ ಅಸಮಾಧಾನ ಹಲವರಲ್ಲಿದೆ. ಆದ್ದರಿಂದ ಸರ್ಜಾಪುರದಲ್ಲಿ ಇಂತಹ ಹೆಜ್ಜೆ ಇಡಲಾಗುತ್ತದೆ. ಇಲ್ಲಿ 150 ಮೀ. ಅಗಲದ ಸಂಪರ್ಕ ರಸ್ತೆ ಮಾಡಿ, ಅಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿ ಪಡಿಸಲಾಗುವುದು. ನೆರೆ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಇಂತಹ ಉಪಕ್ರಮ ಅನಿವಾರ್ಯ’ ಎನ್ನುವುದು ಅವರ ಮುಂದಾಲೋಚನೆ ಆಗಿದೆ.

banner

ಈ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡಿರುವ ಅವರು, `ಸರ್ಜಾಪುರ ಪ್ರದೇಶವು ರಾಜಧಾನಿಯಲ್ಲಿರುವ ಐಟಿ ತಾಣಗಳಿಗೆ ಹತ್ತಿರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 44 ಮತ್ತು 48ಕ್ಕೆ ಹತ್ತಿರಲ್ಲಿದೆ. ಸಂಪರ್ಕ ಸೌಲಭ್ಯದ ದೃಷ್ಟಿಯಿಂದ ಇದು ವರದಾನವಾಗಿದ್ದು, ಈ ಭಾಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆಗೆ ಇಂಬು ನೀಡಲು ಸೂಕ್ತ ಸ್ಥಳವಾಗಿದೆ. ಇದನ್ನೆಲ್ಲ ಪರಿಗಣಿಸಿ, ಇದನ್ನು ಸ್ವಿಫ್ಟ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದು ಸ್ಟಾರ್ಟಪ್ ಹಬ್ ಆಗಲಿದ್ದು, ಇಲ್ಲಿ 8-10 ಅತ್ಯಾಧುನಿಕ ಪ್ಲಗ್ ಅಂಡ್ ಪ್ಲೇ ಸೌಲಭ್ಯಗಳು ಇರಲಿವೆ. ಇಂತಹ ಒಂದೊಂದು ಸ್ಥಾವರಕ್ಕೂ 20-25 ಎಕರೆ ಕೊಡಲಾಗುವುದು’ ಎಂದಿದ್ದಾರೆ.

ಈ ಪ್ಲಗ್ ಅಂಡ್ ಪ್ಲೇ ಪ್ರದೇಶದಲ್ಲಿ ಸುಸಜ್ಜಿತ ಕಚೇರಿಗಳು, ವಸತಿ ಪ್ರದೇಶಗಳು, ಕೋ-ವರ್ಕಿಂಗ್ ತಾಣಗಳು ಎಲ್ಲವೂ ಇರಲಿವೆ. ಈ ಮೂಲಕ ಉದ್ಯಮಗಳ ಒಂದು ವ್ಯವಸ್ಥಿತ ಜಾಲ ಏರ್ಪಡಲಿದ್ದು, ಅವು ಪರಸ್ಪರ ಸಹಭಾಗಿತ್ವ ಏರ್ಪಡಿಸಿಕೊಳ್ಳುವುದು ಸುಗಮವಾಗಲಿದೆ.

ಮುಖ್ಯವಾಗಿ, ಇಡೀ ರಾಜ್ಯವನ್ನೇ ಹಂತಹಂತವಾಗಿ ‘ಸಿಲಿಕಾನ್ ರಾಜ್ಯ’ವನ್ನಾಗಿ ಮಾಡಲಾಗುವುದು. ಸಿಲಿಕಾನ್ ಸಿಟಿ ಅಂದ್ರೆ ಬೆಂಗಳೂರು. ಈಗ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶ. ವಿಜಯಪುರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಐದು ನಗರಗಳಲ್ಲಿ ಮಿನಿ ಕ್ವಿನ್ ಸಿಟಿ ಅಭಿವೃದ್ಧಿಪಡಿಸುವುದರ ಮೂಲಕ ಇದನ್ನು ಸಾಕಾರಗೊಳಿಸುವ ಉದ್ದೇಶ ಇದೆ. ಇದಕ್ಕೆ ಐಟಿ ಇಲಾಖೆಯ ಸಹಕಾರವನ್ನೂ ಪಡೆಯಲಾಗುವುದು. ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪಾಟೀಲ ವಿವರಿಸುತ್ತಾರೆ.

ಇದಲ್ಲದೆ, ಸ್ವಿಫ್ಟ್ ಸಿಟಿಯಲ್ಲಿ ನೆಲೆಯೂರಲಿರುವ ಸಣ್ಣ ಮತ್ತು ಮಧ್ಯಮ ಸ್ತರದ ಸ್ಟಾರ್ಟಪ್ ಉದ್ಯಮಗಳಿಗೆ ಕನಿಷ್ಠ 5,000 ಚದರ ಅಡಿಗಳಿಂದ ಹಿಡಿದು ಗರಿಷ್ಠ 20,000 ಚದರ ಅಡಿಗಳಷ್ಟು ಜಾಗವನ್ನು ಭೋಗ್ಯ, ಕ್ರಯ ಅಥವಾ ಬಂಡವಾಳ ಆಧರಿತ ಹಂಚಿಕೆ ಮಾದರಿಯಲ್ಲಿ ಒದಗಿಸಲಾಗುವುದು. ಈ ಮೂಲಕ, ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಬಗೆಯ ಉದ್ಯಮಗಳ ಅಗತ್ಯಗಳನ್ನು ಪೂರೈಸುವುದು ಸಾಧ್ಯವಾಗಬೇಕೆನ್ನುವುದು ನಮ್ಮ ಚಿಂತನೆಯಾಗಿದೆ. ಮುಖ್ಯವಾಗಿ ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡೇಟಾ ಅನಲಿಟಿಕ್ಸ್ ಮತ್ತು ಫಿನ್-ಟೆಕ್ ನಾವೀನ್ಯತಾ ಕೇಂದ್ರವಾಗಿಯೂ ಮುಂಚೂಣಿಗೆ ಬರಲಿದೆ ಎಂದು ಹೇಳಲು ಅವರು ಮರೆಯುವುದಿಲ್ಲ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
World News ಅಮೆರಿಕದಲ್ಲಿ ಕಟ್ಟಡಕ್ಕೆ ವಿಮಾನ ಡಿಕ್ಕಿ ಹೊಡೆದು ಇಬ್ಬರು ಪೈಲೆಟ್ ಗಳ ಸಾವು ದೋಣಿಗೆ ಡಿಕ್ಕಿ ಹೊಡೆದ ನೌಕಾಪಡೆಯ ಸ್ಪೀಡ್ ಬೋಟ್: 13 ಮಂದಿ ದುರ್ಮರಣ ವಕ್ಫ್ ಗೆ ಸೇರಿದ ದೇವಸ್ಥಾನ, ರೈತರ ಜಮೀನು ವಾಪಸ್: ಸಚಿವ ಜಮೀರ್ ಅಹಮದ್ ಖಾನ್ ಘೋಷಣೆ ಅಂಬೇಡ್ಕರ್ ಮೇಲೆ ಗೌರವ ಇದ್ದರೆ ಸಚಿವ ಸ್ಥಾನದಿಂದ ಅಮಿತ್ ಶಾ ವಜಾ ಮಾಡಿ: ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಗಡುವು Belagavi ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ: ವಿಧಾನಪರಿಷತ್ ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ! 80 ಪ್ರಯಾಣಿಕರ ದೋಣಿಗೆ ಡಿಕ್ಕಿ ಹೊಡೆದ ಸ್ಪೀಡ್ ಬೋಟ್: 1 ಸಾವು, ಇಬ್ಬರು ನಾಪತ್ತೆ ಪ್ರೀತಿಸಿದವರು ಸಿಗಲಿಲ್ಲ ಅಂತ ಮದುವೆ ಆಗಿದ್ದ ಪ್ರೇಮಿಗಳು ಆತ್ಮಹತ್ಯೆ! ಕೋಲಾರದಲ್ಲಿ ಬೊಲೆರೋ- ಬೈಕ್ ಗಳ ನಡುವೆ ಡಿಕ್ಕಿ: 5 ಮಂದಿ ದುರ್ಮರಣ 48 ದಿನದ ನಂತರ ಶಸ್ತ್ರಚಿಕಿತ್ಸೆ ಇಲ್ಲದೇ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್! ವಿಜಯ್ ಮಲ್ಯ, ನೀರವ್ ಮೋದಿಯಿಂದ 22,000 ಕೋಟಿ ಆಸ್ತಿ ವಶ: ನಿರ್ಮಲಾ ಸೀತರಾಮನ್