Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ಬೆಂಗಳೂರು

ರಾಜ್ಯ ಕಂಡ ಪ್ರಾಮಾಣಿಕ, ಧೀಮಂತ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
kengal hanumantayya

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರು ಒಬ್ಬ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ. ಸುಂದರವಾದ ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ ಅವರಿ ಗೆ ಸಲ್ಲುತ್ತದೆ. ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕರಾಗಿ, ಕೇಂದ್ರದ ರೈಲ್ವೆ ಮಂತ್ರಿಯಾಗಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ, ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆಯನ್ನು ನೀಡಿದಂತಹ ಧೀಮಂತ ರಾಜಕಾರಣಿಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿದ್ದರು. ಹನುಮಂತಯ್ಯನವರು ವಿಧಾನಸೌಧಕ್ಕೆ ಬುನಾದಿ ಹಾಕಿದರಾದರೂ, ಉದ್ಘಾಟನೆಯ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿಯಾಗಿರಲಿಲ್ಲವೆಂಬುದು ನೋವಿನ ಸಂಗತಿ. ಅವರ ಆದರ್ಶ ಮತ್ತು ಸಿದ್ದಾಂತಗಳು ಎಲ್ಲರಿಗೂ ಮಾರ್ಗದರ್ಶನ ನೀಡುತ್ತವೆ ಎಂದರು.

ಮತ ಪರಿಷ್ಕರಣೆ

ಮತಪರಿಷ್ಕರಣೆಯ ಎಸ್ ಐ ಆರ್ ಕಾರ್ಯಕ್ಕೆ ಅಡ್ಡಿಪಡಿಸುವುದನ್ನು ಸಹಿಸುವುದಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಪ್ರೀಂ ಕೋರ್ಟ್ ನವರು ಯಾವ ಸಂದರ್ಭಕ್ಕೆ ಹೀಗೆ ಹೇಳಿದ್ದಾರೆ ಎಂಬ ಮಾಹಿತಿ ಪಡೆದು, ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಬಜೆಟ್ ಸಿದ್ಧತೆ

ಬಜೆಟ್ ಸಿದ್ಧತ ಸಭೆಯಲ್ಲಿ ಡಿಸಿಎಂ ಹಾಜರಾಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅಸ್ಸಾಂ ರಾಜ್ಯದಲ್ಲಿ ಸಭೆಯೊಂದಕ್ಕೆ ಹಾಜರಾಗಬೇಕಾದ ಕಾರಣ ಬಜೆಟ್ ಸಿದ್ಧತೆ ಸಭೆಯಲ್ಲಿ ಭಾಗವಹಿಸಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ತಿಳಿಸಿರುವುದಾಗಿ ಹೇಳಿದರು.

ವರಿಷ್ಠರ ತೀರ್ಮಾನವೇ ಅಂತಿಮ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ. ವರಿಷ್ಠರು ಬಯಸಿದರೆ ಮಾತ್ರ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಪ್ರತಾಪ್ ಸಿಂಹರಿಗೆ ಬಿಜೆಪಿಯೇ ಟಿಕೆಟ್ ನೀಡಲಿಲ್ಲ

ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಯಿಸಿ, ಬಿಜೆಪಿ ಪಕ್ಷದವರೇ ತಮ್ಮ ಪಕ್ಷದ ಪ್ರತಾಪ್ ಸಿಂಹರಿಗೆ ಟಿಕೇಟ್ ನೀಡಲಿಲ್ಲ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment