Thursday, November 14, 2024
Google search engine
Homeಬೆಂಗಳೂರುಮಾಜಿ ಸಿಎಂ ನಿಜಲಿಂಗಪ್ಪ ನಿವಾಸ 5 ಕೋಟಿ ರೂ.ಗೆ ಖರೀದಿಸಲು ರಾಜ್ಯ ಸರ್ಕಾರ ನಿರ್ಧಾರ

ಮಾಜಿ ಸಿಎಂ ನಿಜಲಿಂಗಪ್ಪ ನಿವಾಸ 5 ಕೋಟಿ ರೂ.ಗೆ ಖರೀದಿಸಲು ರಾಜ್ಯ ಸರ್ಕಾರ ನಿರ್ಧಾರ

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿ ವಾಸವಿದ್ದ ಮನೆಯನ್ನು ಸರ್ಕಾರ ಶೀಘ್ರ‌ ಖರೀದಿಸಿ, ಒಂದು ತಿಂಗಳಲ್ಲಿ ನೋಂದಣಿ ಮಾಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ನಿಜಲಿಂಗಪ್ಪ ಅವರ ಮನೆ ಖರೀದಿಸಿ ಸಂರಕ್ಷಿಸಲು ಹಾಗೂ ಅಭಿವೃದ್ಧಿಗೊಳಿಸುವ ಸಂಬಂಧ ಚರ್ಚೆ ನಡೆಸಿ ಕಾನೂನುತ್ಮಾಕವಾಗಿ ವ್ಯವಹಾರಿಸಿ ಕೂಡಲೇ ಮನೆ ಖರೀದಿಸಿ ಎಂದು ತಾಕೀತು ಮಾಡಿದರು.

ನಿಜಲಿಂಗಪ್ಪ ಅವರ ಮನೆ ಖರೀದಿ ಹಾಗೂ ಸಂರಕ್ಷಣೆ ಸಂಬಂಧ ಈಗಾಗಲೇ ಸರ್ಕಾರ ೫ ಕೋಟಿ ಅನುದಾ‌ನವನ್ನು ಬಿಡುಗಡೆಗೊಳಿಸಿದ್ದರೂ ತಡವಾಗುತ್ತಿರುವ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ‌ ಹಿಂದೆ ಮನೆ ಖರೀದಿ ಸಂಬಂಧ ತಾಂತ್ರಿಕ ಕಾರಣಗಳು ಎದುರಾಗಿತ್ತು. ಇದೀಗ ನಿಜಲಿಂಗಪ್ಪ ಅವರ ಪುತ್ರ ಹಾಗೂ ಅವರ ಸಂಬಂಧಿಗಳ ಜತೆ ಚರ್ಚೆ ನಡೆಸಿದ್ದು, ಮನೆ ಖರೀದಿ ಪ್ರಕ್ರಿಯಿಗೆ ಮುಂದಾಗಿದ್ದೇವೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಬಳಿಕ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಅವರು, ನಿಜಲಿಂಗಪ್ಪ ಅವರ ಮನೆ ಖರೀದಿ ಹಿನ್ನೆಲೆಯಲ್ಲಿ ಕಾನೂನು ಇಲಾಖೆಯಿಂದ ಅಭಿಪ್ರಾಯ ಪಡೆಯಲಾಗಿದೆ. ನಿಜಲಿಂಗಪ್ಪ ಅವರು ವಾಸವಿದ್ದ ಕೋಟಿ ನಾಡಿನ ಮನೆ ಖಾತೆಯು ಅವರ 3ನೇ ಪುತ್ರ ಎಸ್.ಎನ್.ಕಿರಣ್ ಶಂಕರ್ ಅವರ ಹೆಸರಿನಲ್ಲಿತ್ತು. ನಿಜಲಿಂಗಪ್ಪ ಅವರು ಬರೆದಿಟ್ಟಿರುವ ವಿಲ್ ನಂತೆ ಮನೆ ಖಾತೆ ಪ್ರಸ್ತುತ ನಿಜಲಿಂಗಪ್ಪ ಅವರ ಮೊಮ್ಮಗ ವಿನಯ್ ಬಿನ್ ಎಸ್.ಎ.ಕಿರಣ್ ಶಂಕರ್ ಅವರ ಹೆಸರಿನಲ್ಲಿದ್ದು, ಸಂಪೂರ್ಣ ಇದೀಗ ಆಸ್ತಿಗೆ ವಿನಯ್ ಮಾಲೀಕತ್ವ ಹೊಂದಿದ್ದಾರೆ. ಈ ಸಂಬಂಧ ಅಧಿಕಾರಿಗಳು ಕಿರಣ್ ಅವರೊಂದಿಗೆ ಚರ್ಚೆ ನಡೆಸಿದ್ದು, ತಿಂಗಳಲ್ಲಿ ಮನೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಮನೆ ಖರೀದಿಸಿ ಸಂರಕ್ಷಿಸಲು ಮತ್ತು ಅಭಿವೃದ್ಧಿಪಡಿಸಲು ಐದು ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಪೈಕಿ ಅಂದಾಜು 4.18 ಕೋಟಿ ಹಣದಲ್ಲಿ ಮನೆ ಖರೀದಿಸಲು ತೀರ್ಮಾನಿಸಲಾಗಿದ್ದು, ಮನೆ ಅಭಿವೃದ್ಧಿಗೆ 81,50 ಲಕ್ಷ ಹಣ ವೆಚ್ಚ ಮಾಡಲಾಗುವುದು ಎಂದು ಸಚಿವರು ವಿವರಿಸಿದರು‌.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ, ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್,  ಇಲಾಖೆ ನಿರ್ದೇಶಕಿ ಡಾ.ಧರಣಿ ದೇವಿ ಮಾಲಗತ್ತಿ, ಜಂಟಿ ನಿರ್ದೇಶಕ ಅಶೋಕ್ ಛಲವಾದಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments