ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಂಧಾನ ಯಶಸ್ವಿಯಾಗಿದ್ದು, ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.
ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು. ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದರು.
ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರವನ್ನು ವಾಪಾಸ್ಸು ಪಡೆದಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 15,000 ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಘಟನೆಯೊಂದಿಗೆ ಮಾತುಕತೆ ನಡೆಸಿ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು.