Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಕ್ರೀಡೆ

ಬೆಥಾಲ್ ಶತಕ ವ್ಯರ್ಥ: 7 ರನ್ ರೋಚಕ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
sanju samson

ಮುಂಬೈ: ಜಿದ್ದಾಜಿದ್ದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ರನ್ ಗಳ ರೋಚಕ ಜಯ ಸಾಧಿಸಿದ ಭಾರತ ತಂಡ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಹಾಕಿದೆ.

ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಒಡ್ಡಿದ 254 ರನ್ ಗಳ ಕಠಿಣ ಗುರಿ ಬೆಂಬತ್ತಿದ ಇಂಗ್ಲೆಂಡ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 246 ರನ್ ಗಳಿಸಿತು.

ಇಂಗ್ಲೆಂಡ್ ಪರ ಏಕಾಂಗಿ ಹೋರಾಟ ನಡೆಸಿದ ಜೇಕಬ್ ಬೆಥಾಲ್ 48 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್ ಒಳಗೊಂಡ 105 ರನ್ ಬಾರಿಸಿದರು. ಕೊನೆಯ ಓವರ್ ನಲ್ಲಿ ಬೆಥಾಲ್ ಔಟಾಗುತ್ತಿದ್ದಂತೆ ಭಾರತದ ಗೆಲುವು ದೃಢಪಟ್ಟಿತು. ಭಾರತ ತಂಡ ಫೈನಲ್ ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಎರಡೂ ತಂಡಗಳು ಮೊದಲ ಬಾರಿ ಫೈನಲ್ ನಲ್ಲಿ ಮುಖಾಮುಖಿ ಆಗಲಿವೆ.

ಆರಂಭಿಕ ಸಂಜು ಸ್ಯಾಮ್ಸನ್ ಸತತ ಎರಡನೇ ಬಾರಿ ಶತಕ ಗಳಿಸುವ ಅವಕಾಶ ಕೈ ತಪ್ಪಿಸಿಕೊಂಡರೂ ಭಾರತ ತಂಡ ಟಿ-20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಬೃಹತ್ ಮೊತ್ತ ಪೇರಿಸಲು ನೆರವಾದರು.

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 253 ರನ್ ಪೇರಿಸಿತು.

ಸೂಪರ್ ಸಿಕ್ಸ್ ಪಂದ್ಯದಲ್ಲಿ ಫಾರ್ಮ್ ಕಂಡುಕೊಂಡಿದ್ದ ಸಂಜು ಸ್ಯಾಮ್ಸನ್ ಸೆಮಿಫೈನಲ್ ಪಂದ್ಯದಲ್ಲೂ ಮಿಂಚಿನ ಆಟವಾಡಿ ಶತಕದ ಹೊಸ್ತಿಲಲ್ಲಿ ಎಡವಿದರು. ಆದರೂ ಭಾರತ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್ ಒಳಗೊಂಡ 89 ರನ್ ಬಾರಿಸಿ ಜಾಕ್ಸ್ ಗೆ ವಿಕೆಟ್ ಒಪ್ಪಿಸಿದರು.

ಆರಂಭಿಕ ಅಭಿಷೇಕ್ ಶರ್ಮ (9) ವಿಕೆಟ್ ಬೇಗನೇ ಕಳೆದುಕೊಂಡ ನಂತರ ಜೊತೆಯಾದ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ (39) ಎರಡನೇ ವಿಕೆಟ್ ಗೆ 97 ರನ್ ಜೊತೆಯಾಟ ನಿಭಾಯಿಸಿದರು.

ನಂತರ ಬಂದ ಶಿವಂ ದುಬೆ 25 ಎಸೆತಗಳಲ್ಲಿ 1 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 43 ರನ್ ಚಚ್ಚಿದರು. ಹಾರ್ದಿಕ್ ಪಾಂಡ್ಯ (27) ಮತ್ತು ತಿಲಕ್ ವರ್ಮಾ (21) ಸಿಡಿಲಬ್ಬರದ ಆಟವಾಡಿ ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment