Friday, May 15, 2026
Google search engine
Homeದೇಶನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್: ಕಾಲ್ತುಳಿತ ಪ್ರಕರಣದಲ್ಲಿ ಜಾಮೀನು ಮಂಜೂರು

ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್: ಕಾಲ್ತುಳಿತ ಪ್ರಕರಣದಲ್ಲಿ ಜಾಮೀನು ಮಂಜೂರು

ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆ ಮೃತಪಟ್ಟು, ಬಾಲಕ ಅಸ್ವಸ್ಥಗೊಂಡಿದ್ದ.

ಕಾಲ್ತುಳಿತ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದ ನಾಂಪಲ್ಲಿ ಸೆಷನ್ಸ್ ನ್ಯಾಯಾಲಯ ಅಲ್ಲು ಅರ್ಜುನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

1 ಲಕ್ಷ ರೂ. ಭದ್ರತಾ ಠೇವಣಿ ಹಾಗೂ ಇಬ್ಬರು ಶ್ಯೂರಿಟಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದ್ದು, ಪೊಲೀಸರ ತನಿಖೆಗೆ ಸಹಕರಿಸುವಂತೆ ಸೂಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments