Monday, June 15, 2026
Google search engine
Homeಕಾನೂನುಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಬಿಗ್‌ ರಿಲೀಫ್:‌ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಬಿಗ್‌ ರಿಲೀಫ್:‌ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ವಿರುದ್ಧ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಅಸಿಂಧು ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ.

ಚುನಾವಣಾ ಆಯೋಗಕ್ಕೆ ಸೂಕ್ತ ಮಾಹಿತಿ ನೀಡಿದೇ ಜಿಎಸ್‌ ಟಿ ವಿವರಗಳನ್ನು ಮರೆ ಮಾಚಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ದೂರು ಆಧರಿಸಿ ಹೈಕೋರ್ಟ್‌ ಸುಬ್ಬಾರೆಡ್ಡಿ ಅವರ ಶಾಸಕರಾಗಿ ಆಯ್ಕೆಯನ್ನು ಅಸಿಂಧು ಎಂದು ಆದೇಶ ನೀಡಿತ್ತು.

ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಸುಪ್ರೀಂಕೋರ್ಟ್‌ ಮೇಲ್ಮನವಿ ಸಲ್ಲಿಸಲು ಮುನಿರಾಜುಗೆ ೬ ವಾರಗಳ ಅವಕಾಶ ನೀಡಿ ಸೆಪ್ಟೆಂಬರ್‌ ಗೆ ವಿಚಾರಣೆ ಮುಂದೂಡಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments