ನಟ ದರ್ಶನ್ ಮತ್ತು ಸಹಚರರ ವಿರುದ್ಧದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣವನ್ನು ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯ ಮೇ 20ಕ್ಕೆ ಮುಂದೂಡಿದೆ.
ಹೈಕೋರ್ಟ್ ಸೂಚನೆ ಮೇರೆಗೆ ತಿಂಗಳಲ್ಲಿ ಒಂದು ಬಾರಿ ನಡೆಯುವ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳು ಖುದ್ದು ಹಾಜರಾತಿಗೆ ಸೂಚನೆ ನೀಡಲಾಗಿತ್ತು. ಆದರೆ ನಟ ದರ್ಶನ್ ಬೆನ್ನುನೋವಿನ ಕಾರಣ ವಿಚಾರಣೆಗೆ ಗೈರು ಹಾಜರಾತಿಗೆ ವಿನಾಯಿತು ನೀಡಬೇಕು ಎಂದು ಮನವಿ ಮಾಡಿದ್ದರು.
ದರ್ಶನ್ ಗೈರು ಹಾಜರಿ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಿತು. ಅಲ್ಲದೇ ಈ ರೀತಿ ಕಾರಣಗಳನ್ನು ನೀಡಿ ವಿಚಾರಣೆಗೆ ಗೈರು ಹಾಜರಾಗುವ ಅಭ್ಯಾಸ ಬೆಳೆಸಿಕೊಳ್ಳದಂತೆ ಕೋರ್ಟ್ ಎಚ್ಚರಿಕೆ ನೀಡಿತು.



