ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂಬ ಜಾಹಿರಾತು ಹಂಚಿಕೊಳ್ಳುವ ಮೂಲಕ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಕೇಶವ ಪ್ರಸಾದ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಅವರ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದಂತ ಕರಪ್ಷನ್ ರೇಟ್ ಕಾರ್ಡ್ ಜಾಹೀರಾತು ಸಂಬಂಧ ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅರ್ಜಿಯನ್ನು ವಿಚಾರಣೆ ನಡೆಸಿ ಪ್ರಕರಣ ರದ್ದುಪಡಿಸಿದೆ.



